Tuesday, June 6, 2023
Homeರಾಜಕೀಯ15 ಕೋ.ರೂ ವೆಚ್ಚದಲ್ಲಿ ಧರ್ಮಸ್ಥಳ ಚತುಷ್ಪಥ ರಸ್ತೆ...!!!

15 ಕೋ.ರೂ ವೆಚ್ಚದಲ್ಲಿ ಧರ್ಮಸ್ಥಳ ಚತುಷ್ಪಥ ರಸ್ತೆ…!!!

- Advertisement -


Renault

Renault
Renault

- Advertisement -

ಬೆಳ್ತಂಗಡಿ: ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನ ಸಂದರ್ಶಿಸುವ ಭಕ್ತರ ಅನುಕೂಲಕ್ಕಾಗಿ ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಿಸಲಾದ 15 ಕೋ.ರೂ. ವೆಚ್ಚದ ಚತುಷ್ಪಥ ರಸ್ತೆ ಕಾಮಗಾರಿಯನ್ನು ರಾಜ್ಯದ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಲೋಕಾರ್ಪಣೆಗೊಳಿಸಿದರು.

ಲೋಕೋಪಯೋಗಿ ಇಲಾಖೆಯಿಂದ ಸುಮಾರು 15 ಕೋ.ರೂ. ಮೊತ್ತದಲ್ಲಿ 2 ಕಿ.ಮೀ. ಚತುಷ್ಪಥ ರಸ್ತೆಗೆ ನಿರ್ಮಾಣಗೊಂಡಿದೆ. ಧರ್ಮಸ್ಥಳ ಸ್ನಾನಘಟ್ಟ ಸಮೀಪದಿಂದ ಶ್ರೀ ಕ್ಷೇ.ಧ.ಪ್ರೌಢ ಶಾಲೆವರೆಗೆ ಚತುಷ್ಪಥ ರಸ್ತೆ ನಿರ್ಮಿಸಲಾಗಿದೆ 7.50 ರಂತೆ ಎರಡು ಬದಿ ಒಟ್ಟು 15 ಮೀಟರ್ ಅಗಲವಾದ ರಸ್ತೆ ಮಧ್ಯ 2.50 ಮೀಟರ್ ಗಾರ್ಡನಿಂಗ್ ಗಾಗಿ ಮೀಡಿಯನ್ (ಡಿವೈಡರ್) ನಿರ್ಮಿಸಲಾಗಿದೆ.

ಈ ವೇಳೆ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್, ಬಿ.ಜೆ.ಪಿ. ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ತಾ.ಪಂ. ಸದಸ್ಯೆ ಧನಲಕ್ಷ್ಮೀ, ಪುತ್ತೂರು ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್, ತಹಶೀಲ್ದಾರ್ ಮಹೇಶ್ ಜೆ., ತಾ. ಪಂ.ಇ.ಒ. ಕುಸುಮಾಧರ್ ಕೆ., ಲೋಕೋಪಯೋಗಿ ಇಲಾಖೆ ಕಾರ್ಯನಿವಾಹಕ ಎಂಜಿನಿಯರ್ ಶಿವಪ್ರಸಾದ್ ಅಜಿಲ, ಬಿ.ಜೆ.ಪಿ. ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್ ಮತ್ತಿತರರು ಉಪಸ್ಥಿತರಿದ್ದರು.

- Advertisement -

LEAVE A REPLY

Please enter your comment!
Please enter your name here

Most Popular

Recent Comments