ಬೆಂಗಳೂರು(ಫೆ.01): ವರದಕ್ಷಿಣೆ ಕಿರುಕುಳ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರ್ತೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವರ್ತೂರು ನಿವಾಸಿ ಉಷಾ(26) ಆತ್ಮಹತ್ಯೆಗೆ ಶರಣಾದ ಮಹಿಳೆ. ಐದು ವರ್ಷಗಳ ಹಿಂದೆ ಉಷಾ ರಂಜಿತ್‌ನನ್ನು ವಿವಾಹವಾಗಿದ್ದರು. ದಂಪತಿಗೆ ಒಂದು ಮಗುವಿದೆ. ಶನಿವಾರ ರಾತ್ರಿ ಉಷಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದನ್ನು ಗಮನಿಸಿದ ಪತಿ ರಂಜಿತ್‌ಆಕೆಯ ಪಾಲಕರಿಗೆ ವಿಷಯ ತಿಳಿಸಿದ್ದಾರೆ.
ಮದುವೆಗೆ ವಿರೋಧ: ನೇಣಿಗೆ ಕೊರಳೊಡ್ಡಿದ ಯುವ ಪ್ರೇಮಿಗಳು.
ಈ ಸಂಬಂಧ ಪತಿ ರಂಜಿತ್‌ಹಾಗೂ ಆತನ ಮನೆಯವರು ಉಷಾಳಿಗೆ ವರದಕ್ಷಿಣೆ ತರುವಂತೆ ಕಿರುಕುಳ ಕೊಡುತ್ತಿದ್ದರು. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿ ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.