- Advertisement -
ಪುತ್ತೂರು: ಪ್ರವಾಸೋದ್ಯಮ ಇಲಾಖೆಯ ಯೋಜನೆಯಡಿ ಪುತ್ತೂರು ತಾಲೂಕಿನ ಕೆಯ್ಯೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ರೂ.75ಲಕ್ಷ ಅನುದಾನದ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮವನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ರವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ತಾಲೂಕು ಪಂಚಾಯತ್ ಸದಸ್ಯೆ ಭವಾನಿ ಚಿದಾನಂದ, ದ.ಕ. ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಜಯರಾಮ ರೈ ಬಳ್ಳಜ್ಜ, ಕೆಯ್ಯೂರು ಗ್ರಾಮ ಪಂಚಾಯತ್ ಸದಸ್ಯರುಗಳು, ಬಿಜೆಪಿ ಪ್ರಮುಖರಾದ ಶಶಿಧರ್ ಬೋಳಿಕಲ, ಕೃಷ್ಣ ಕುಮಾರ್ ರೈ, ಶಿವರಾಮ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.