Sunday, September 24, 2023
HomeUncategorizedರಸ್ತೆಯ ಹೊಂಡ ತಪ್ಪಿಸಲು ಹೋಗಿ ಅಪಘಾತ: ವೈದ್ಯ ವಿದ್ಯಾರ್ಥಿನಿ ಮೃತ್ಯು

ರಸ್ತೆಯ ಹೊಂಡ ತಪ್ಪಿಸಲು ಹೋಗಿ ಅಪಘಾತ: ವೈದ್ಯ ವಿದ್ಯಾರ್ಥಿನಿ ಮೃತ್ಯು

- Advertisement -



Renault

Renault
Renault

- Advertisement -

ಬೆಂಗಳೂರು: ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತ ಸಂಭವಿಸಿದ ಪರಿಣಾಮ ವೈದ್ಯ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ನಗರ ಲಿಂಗರಾಜಪುರಂ ಮುಖ್ಯ ರಸ್ತೆಯಲ್ಲಿ ಶನಿವಾರ ನಡೆದಿದೆ.

ತಶ್ವಿಕ್ ಬುಷ್ರಾ ಮೃತ ವಿದ್ಯಾರ್ಥಿನಿಯಾಗಿದ್ದಾರೆ. ಬೆಂಗಳೂರು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯಾಗಿರುವ ತಶ್ವಿಕ್ ಲಿಂಗರಾಜಪುರಂ ನಿವಾಸಿಯಾಗಿದ್ದಾರೆ.

ನಿನ್ನೆ ಬೆಳಿಗ್ಗೆ 11.45ರ ಸುಮಾರಿಗೆ ಘಟನೆ ಸಂಭವಿಸಿದೆ. ದ್ವಿಚಕ್ರ ವಾಹನದಲ್ಲಿ ಕಾಲೇಜಿಗೆ ತೆರಳುವ ಸಂದರ್ಭದಲ್ಲಿ ರಸ್ತೆಯಲ್ಲಿದ್ದ ಗುಂಡಿ ತಪ್ಪಿಸಲು ಹೋಗಿದ್ದು, ಈ ವೇಳೆ ಹಿಂಬದಿಯಿಂದ ಬಂದಿರುವ ವಾಹನ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.

ಅಪಘಾತ ಸಂಭವಿಸುತ್ತಿದ್ದಂತೆಯೇ ಸ್ಥಳದಲ್ಲಿ ನೆರೆದ ಸ್ಥಳೀಯರು ಬಿಬಿಎಂಪಿ ಅಧಿಕಾರಿಗಳು ರಸ್ತೆಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಅಪಘಾತ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು ಡಿಕ್ಕಿ ಹೊಡೆದ ವಾಹನ ಸವಾರ ಪಳನಿ ಎಂಬುವವನನ್ನು ಬಂಧನಕ್ಕೊಳಪಡಿಸಿದ್ದಾರೆ.

ಈ ನಡುವೆ ವಿದ್ಯಾರ್ಥಿನಿ ತಂದೆ ಮುಷ್ತಕ್ ಅಹ್ಮದ್ ಅವರು ಪೊಲೀಸರಿಗೆ ದೂರು ನೀಡಿದ್ದು, ತಪ್ಪಿತಸ್ಥ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

- Advertisement -

LEAVE A REPLY

Please enter your comment!
Please enter your name here

Most Popular

Recent Comments