Tuesday, September 27, 2022
HomeUncategorizedಏಕಾಂತ ಚಿಕಿತ್ಸೆಗೆ ಸಿದ್ಧರಾದ ಸಿದ್ದರಾಮಯ್ಯ: ಈ ಬಾರಿಯ ಸೂಚನೆ ಏನು?

ಏಕಾಂತ ಚಿಕಿತ್ಸೆಗೆ ಸಿದ್ಧರಾದ ಸಿದ್ದರಾಮಯ್ಯ: ಈ ಬಾರಿಯ ಸೂಚನೆ ಏನು?

- Advertisement -
Renault

Renault

Renault

Renault


- Advertisement -

ಬೆಂಗಳೂರು: ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೂ ಮುನ್ನ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ತೆರಳಲು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಯಾರಿ ನಡೆಸಿದ್ದಾರೆ. ಫೆಬ್ರವರಿ 22ರಿಂದ ಪ್ರಕೃತಿ ಚಿಕಿತ್ಸೆಗೆ ತೆರಳಿ 8 ದಿನಗಳ ಕಾಲ ಚಿಕಿತ್ಸೆ ಪಡೆಯಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಹೀಗಾಗಿ ಮತ್ತೆ ಶೀಘ್ರದಲ್ಲೇ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿರುವ ಶಾಂತಿವನ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. Siddaramaiah Naturopathy treatment

ಪ್ರಕೃತಿ ಚಿಕಿತ್ಸೆ ಬಳಿಕ‌ ಸಿದ್ದರಾಮಯ್ಯ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಕಳೆದ ಬಾರಿ ಶಾಂತಿವನಕ್ಕೆ ಬಂದಾಗ ಸಿದ್ದರಾಮಯ್ಯ ಭಾರಿ ಬಿರುಗಾಳಿ ಎಬ್ಬಿಸಿದ್ದರು.

ಹೆಚ್.ಡಿ.ಕುಮಾರಸ್ವಾಮಿ ಸರ್ಕಾರದ ಪತನದ ಮುನ್ಸೂಚನೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಈ ಬಾರಿಯೂ ಸಹ ಸಿದ್ದರಾಮಯ್ಯ ಪ್ರಕೃತಿ ಚಿಕಿತ್ಸೆ ಪಡೆಯಲು ಬರುವುದು ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಇವರ ಈ ಭೇಟಿ ಕೇವಲ ಅವರ ಆರೋಗ್ಯಕ್ಕೆ ಸೀಮಿತವಾ ಅಥವಾ ರಾಜಕೀಯದ ಆರೋಗ್ಯದಲ್ಲೂ ಏರುಪೇರಾಗುತ್ತಾ ಎಂಬ ಕುತೂಹಲ ಮೂಡಿದೆ.

ಇಂದಿನಿಂದ 2 ದಿನಗಳ ಕಾಲ ಸಿದ್ದರಾಮಯ್ಯ ಬಾದಾಮಿ ಪ್ರವಾಸ
ಈ ಮಧ್ಯೆ ಪ್ರತಿಪಕ್ಷ ನಾಯಕ, ಬಾದಾಮಿ ಕ್ಷೇತ್ರದ ಶಾಸಕ ಸಿದ್ದರಾಮಯ್ಯ ಇಂದಿನಿಂದ 2 ದಿನಗಳ ಕಾಲ ಬಾದಾಮಿ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 10ಕ್ಕೆ ಗೋವನಕೊಪ್ಪ ಗ್ರಾಮಕ್ಕೆ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಅಲ್ಲಿ ಗೋವನಕೊಪ್ಪ-ಕೊಣ್ಣೂರು ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರೆವೇರಿಸಲಿದ್ದಾರೆ. ಬೆ.10.30ಕ್ಕೆ ಅಂಬೇಡ್ಕರ್ ಸಮುದಾಯ ಭವನಕ್ಕೆ ಭೂಮಿಪೂಜೆ ಬಳಿಕ ಬೆಳಗ್ಗೆ 11.30ಕ್ಕೆ ಸಾರ್ವಜನಿಕರ ಅಹವಾಲು ಸ್ವೀಕಾರ, ಮಧ್ಯಾಹ್ನ 2 ಗಂಟೆಗೆ ಕಟಗೇರಿ ಗ್ರಾಮಕ್ಕೆ ಸಿದ್ದರಾಮಯ್ಯ ಭೇಟಿ ನೀಡಲಿದ್ದಾನೆ.

ನಂತರ ಮಧ್ಯಾಹ್ನ 3 ಗಂಟೆಗೆ ಕೆಲವಡಿ ಗ್ರಾಮಕ್ಕೆ ತೆರಳಿ ಚರಂಡಿ, ಕಾಂಕ್ರೀಟ್ ರಸ್ತೆ ಕಾಮಗಾರಿ ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಗುಳೇದಗುಡ್ಡದಲ್ಲಿ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಸಂಜೆ 4.30ಕ್ಕೆ ಲಕ್ಷ್ಮಣ ಹಟ್ಟಿ 21ನೇ ಪುಣ್ಯಸ್ಮರಣೆಯಲ್ಲಿ ಭಾಗಿ, ರಾತ್ರಿ ಬಾದಾಮಿಯಲ್ಲಿ ವಾಸ್ತವ್ಯ ಹೂಡಿ ನಾಳೆ ಬಾದಾಮಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

ನಾಳೆ ಬೆಳಗ್ಗೆ ಮುಷ್ಟಿಗೇರಿ ಗ್ರಾಮಕ್ಕೆ ಭೇಟಿ ನೀಡಿ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ಕಟ್ಟಡ, ಬೀರಲಿಂಗೇಶ್ವರ ಸಮುದಾಯ ಭವನ ಭೂಪೂಜೆಯಲ್ಲಿ ಭಾಗಿಯಾಗುತ್ತಾರೆ. ಮಧ್ಯಾಹ್ನ 12 ಗಂಟೆಗೆ ಪಟ್ಟದಕಲ್ಲು ಪ್ರವಾಸಿ ಗ್ರಾಮಕ್ಕೆ ತೆರಳಿ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗೆ ಅಡಿಗಲ್ಲು ಸಮಾರಂಭದಲ್ಲಿ ಹೆಸ್ಕಾಂ ಉಪವಿಭಾಗ ಕಚೇರಿ ಉದ್ಘಾಟಿಸಲಿದ್ದಾರೆ. ನಾಳೆ ಮಧ್ಯಾಹ್ನ 1 ಗಂಟೆಗೆ ಬಾದಾಮಿ ಶಾಸಕರ ಕಚೇರಿ ಆವರಣದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗಯಾಗಿ ಬಳಿಕ ಬೆಂಗಳೂರಿಗೆ ಮರಳಲಿದ್ದಾರೆ.

- Advertisement -


LEAVE A REPLY

Please enter your comment!
Please enter your name here

- Advertisment -

Most Popular

Recent Comments