ಬೆಂಗಳೂರು: ಕೃಷಿ ವಿಧೇಯಕಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸುವ ಸಲುವಾಗಿ ಇಂದು ಜಂಟಿ ಅಧಿವೇಶನದಲ್ಲಿ ನಡೆಯುವ ರಾಷ್ಟ್ರಪತಿ ಭಾಷಣವನ್ನು ಬಹಿಷ್ಕರಿಸಲು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರು ನಿರ್ಧರಿಸಿದ್ದಾರೆ.
ರಾಷ್ಟ್ರಪತಿ ಭಾಷಣವನ್ನು ಬಹಿಷ್ಕರಿಸಲು ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ನಿರ್ಧರಿಸಿದೆ. ರಾಜ್ಯ ಸಭಾ ಸದಸ್ಯರಾಗಿರುವ ದೇವೇಗೌಡ ಅವರು ಕೂಡಾ ಇದೇ ತೀರ್ಮಾನ ಕೈಗೊಂಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೃಷಿ ಕಾಯ್ದೆಗಳನ್ನು ವಿರೋಧಿಸಿ ನನ್ನ ರೈತ ಸಹೋದರರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲವಾಗಿ ಇಂದು ರಾಷ್ಟ್ರಪತಿಗಳ ಭಾಷಣಕ್ಕೆ ಹಾಜರಾಗದಿರಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.