Friday, October 7, 2022
HomeUncategorizedಸುರಿಕುಮೇರು ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ತಪ್ಪಿತು ಭಾರೀ ಅನಾಹುತ

ಸುರಿಕುಮೇರು ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ತಪ್ಪಿತು ಭಾರೀ ಅನಾಹುತ

- Advertisement -
Renault

Renault

Renault

- Advertisement -

ಮಂಗಳೂರು : ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಅಪಾಯಕಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅನಿಲ ಸಾಗಾಟದ ಗ್ಯಾಸ್‌ ಟ್ಯಾಂಕರ್ ಪಲ್ಟಿಯಾಗಿರುವ ವಟನೆ ದಕ್ಷಿಣ ಕನ್ನಡ ಜಿಲ್ಲೆಯ ಸೂರಿಕುಮೇರಿನಲ್ಲಿ ನಡೆದಿದೆ.

ಗ್ಯಾಸ್ ತುಂಬಿದ್ದ ಟ್ಯಾಂಕರ್ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಮುಂಜಾನೆ ನಾಲ್ಕು ಗಂಟೆಯ ಸುಮಾರಿಗೆ ಟ್ಯಾಂಕರ್ ಪಲ್ಟಿಯಾಗಿರುವ ಕುರಿತು ಸ್ಥಳೀಯರು ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿಯನ್ನು ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕದಳ ಹಾಗೂ ಪೊಲೀಸ್ ಸಿಬ್ಬಂಧಿಗಳು ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಗ್ಯಾಸ್ ಸೋರಿಕೆಯಾಗದ ಹಿನ್ನೆಲೆಯಲ್ಲಿ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

- Advertisement -


LEAVE A REPLY

Please enter your comment!
Please enter your name here

Most Popular

Recent Comments