Tuesday, October 26, 2021
Homeಕ್ರೈಂಮಹಿಳೆಯ ಮೇಲೆ ಭೀಕರ ಅತ್ಯಾಚಾರ…ಸಂತ್ರಸ್ಥೆ ಮೇಲೆ ಕ್ರೌರ್ಯ ಮೆರೆದ ಕೀಚಕರು, ಮಹಿಳೆಯ ಸ್ಥಿತಿ ಚಿಂತಾಜನಕ…ಗಣೇಶನ ಹಬ್ಬದ...

ಮಹಿಳೆಯ ಮೇಲೆ ಭೀಕರ ಅತ್ಯಾಚಾರ…ಸಂತ್ರಸ್ಥೆ ಮೇಲೆ ಕ್ರೌರ್ಯ ಮೆರೆದ ಕೀಚಕರು, ಮಹಿಳೆಯ ಸ್ಥಿತಿ ಚಿಂತಾಜನಕ…ಗಣೇಶನ ಹಬ್ಬದ ದಿನದಂದೇ ಬೆಳ್ಳಂಬೆಳಗ್ಗೆ ನಡೆಯಿತು ಈ ನೀಚ ದುಷ್ಟ ಕೃತ್ಯ…

- Advertisement -
Renault
- Advertisement -
Home Plus
- Advertisement -

ಭಾರತದಲ್ಲಿ ಮತ್ತೊಂದು ನೀಚ ಕೃತ್ಯ ನಡೆದಿದ್ದು,
ಮುಂಬೈನಲ್ಲಿ 35 ವರ್ಷ ವಯಸ್ಸಿನ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಸಾಕಿ ನಾಕಾ ಪ್ರದೇಶದಲ್ಲಿ ನಿನ್ನೆ ಬೆಳಗಿನ ಜಾವ 3 ಗಂಟೆಗೆ ಮಹಿಳೆಯ ಮೇಲೆ ಅತ್ಯಾಚಾರ ಎಸಗಿರುವ ದುಷ್ಕರ್ಮಿಗಳು, ಆಕೆಯ ಖಾಸಗಿ ಭಾಗಕ್ಕೆ ರಾಡ್ ಹಾಕಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಮುಂಜಾನೆ 3:30 ರ ವೇಳೆಗೆ ಪೊಲೀಸ್ ನಿಯಂತ್ರಣ ಕೊಠಡಿಗೆ ಸಾರ್ವಜನಿಕರು ಕರೆ ಮಾಡಿ, ಕೈರಾನಿ ರಸ್ತೆಯಲ್ಲಿ ಮಹಿಳೆಯೊಬ್ಬರು ಪ್ರಜ್ಞಾಹೀನಾ ಸ್ಥಿತಿಯಲ್ಲಿ ಬಿದ್ದಿದ್ದು, ಅವರಿಗೆ ತೀವ್ರ ರಕ್ತ ಸ್ರಾವವಾಗಿದೆ ಎಂದು ಮಾಹಿತಿ ನೀಡಿದ್ದರು. ತಕ್ಷಣವೇ ಘಟನಾ ಸ್ಥಳಕ್ಕೆ ತೆರಳಿದ ಪೊಲೀಸರ ತಂಡ ಮಹಿಳೆಯನ್ನು ತಕ್ಷಣವೇ ಘಾಟ್ಕೋಪರ್ ರಾಜವಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಮಹಿಳೆಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮಾಹಿತಿ ದೊರಕಿದೆ.

ಸಾಕಿ ನಾಕಾದ ಕೈರಾನಿ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಡಿಸಿಪಿ ಹಾಗೂ ಹೆಚ್ಚುವರಿ ಪೊಲೀಸ್ ಆಯುಕ್ತರು ಸ್ಥಳಕ್ಕೆ ಭೇಟಿ ಕೊಟ್ಟು ತನಿಖೆ ನಡೆಸಿದ್ದಾರೆ. ಈ ಘಟನೆಗೆ ಸಂಬಂಧಪಟ್ಟಂತೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಮತ್ತಷ್ಟು ದುಷ್ಕರ್ಮಿಗಳು ಭಾಗಿಯಾಗಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಘಟನೆಯ ಬಗ್ಗೆ ಅತ್ಯಾಚಾರ ಹಾಗೂ ಹತ್ಯೆಗೆ ಯತ್ನ ಸೇರಿದಂತೆ ವಿವಿಧ ಸೆಕ್ಷನ್ ಗಳಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

LEAVE A REPLY

Please enter your comment!
Please enter your name here

- Advertisment -

Most Popular

Recent Comments