ನವದೆಹಲಿ : ಹೆಣ್ಣು ಮಕ್ಕಳ ಸಬಲೀಕರಣ, ಉತ್ತಮ ಆರೋಗ್ಯ ಆರೈಕೆ, ಲಿಂಗ ಸೂಕ್ಷ್ಮತೆ ಸುಧಾರಣೆ ಸೇರಿದಂತೆ ಹಲವು ಉಪಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ಭಾನುವಾರ ತಿಳಿಸಿದರು.
ಪ್ರತಿ ವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತದೆ. ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದಂದು ನಾವು ನಮ್ಮ #DeshKiBeti ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ನಮಸ್ಕರಿಸುತ್ತೇವೆ ಎಂದು ಮೋದಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಹೆಣ್ಣು ಮಕ್ಕಳ ಸಬಲೀಕರಣ, ಶಿಕ್ಷಣ, ಉತ್ತಮ ಆರೋಗ್ಯ ಆರೈಕೆ, ಲಿಂಗ ಸೂಕ್ಷ್ಮತೆ ಸುಧಾರಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಂಡಿದೆ ಎಂದು ಅವರು ಹೇಳಿದರು.
ಹೆಣ್ಣು ಮಗುವಿನ ಸಬಲೀಕರಣಕ್ಕಾಗಿ ಶ್ರಮಿಸುತ್ತಿರುವ ಮತ್ತು ಆಕೆ ಘನತೆಯ ಜೀವನ ನಡೆಸಲು ಅವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಎಲ್ಲರನ್ನೂ ವಿಶೇಷವಾಗಿ ಶ್ಲಾಘಿಸುವ ದಿನ ಕೂಡ ಆಗಿದೆ ಎಂದು ಮತ್ತೊಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.