ಹುಬ್ಬಳ್ಳಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಲ್ಲಿ ಖಾಲಿಯಿರುವ ಸಹಾಯಕ ನಿರ್ದೇಶಕರ ಹುದ್ದೆಗಳಿಗೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ(ಪಿಡಿಒ)ಗಳಿಗೆ ಮುಂಬಡ್ತಿ ನೀಡುವ ಮೂಲಕ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಕೆ.ಎಸ್‌.ಈಶ್ವರಪ್ಪ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದ ಗೋಕುಲ ಗಾರ್ಡನ್‌ನಲ್ಲಿ ನಡೆದ ‘ಗ್ರಾಮ ಪಂಚಾಯತಿ ಸಬಲೀಕರಣದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಪಾತ್ರ ಹಾಗೂ ಸವಾಲುಗಳು’ ರಾಜ್ಯಮಟ್ಟದ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಪಂಚಾಯತ್‌ ರಾಜ್‌ ಇಲಾಖೆಯಲ್ಲಿ ಈಗಾಗಲೇ 170ಕ್ಕೂ ಹೆಚ್ಚು ಸಹಾಯಕ ನಿರ್ದೇಶಕರ ಹುದ್ದೆಗಳು ಖಾಲಿ ಇವೆ. ಅವುಗಳನ್ನು ಪಿಡಿಒಗಳಿಗೆ ಮುಂಬಡ್ತಿ ಮೂಲಕ ಭರ್ತಿ ಮಾಡಿಕೊಳ್ಳುತ್ತೇವೆ. ತಾಲೂಕಿಗೆ ಒಂದು ಸಹಾಯಕ ನಿರ್ದೇಶಕರ ಹುದ್ದೆಗಳನ್ನು 2ಕ್ಕೆ ಹೆಚ್ಚಿಸಲು ಬೇಡಿಕೆ ಇದೆ. ಇನ್ನು ಪಿಡಿಒಗಳ ಹುದ್ದೆಯನ್ನು ಬಿ ಗ್ರೂಪ್‌ಗೆ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

LEAVE A REPLY

Please enter your comment!
Please enter your name here