ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮಣ್ಣಗುಡ್ಡೆ ವಾರ್ಡಿನ ಗುಂಡುರಾವ್ ಲೈನ್ ನಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಗುಂಡುರಾವ್ ಲೇನ್ ನಲ್ಲಿ ರಸ್ತೆ ಅಭಿವೃದ್ಧಿಯ ಕುರಿತು ಸಾರ್ವಜನಿಕರ ಬೇಡಿಕೆಯಂತೆ ಅನುದಾನ ಬಿಡುಗಡೆಗೊಳಿಸಲಾಗಿದೆ. ಈ ಅನುದಾನದಲ್ಲಿ ರಸ್ತೆ ಕಾಂಕ್ರೀಟೀಕರಣಕ್ಕೆ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ, ಸ್ಥಾಯಿ ಸಮಿತಿಯ ಅದ್ಯಕ್ಷರಾದ ಜಗದೀಶ್ ಶೆಟ್ಟಿ ಬೋಳೂರು,ಕಿರಣ್ ಕುಮಾರ್, ಸ್ಥಳೀಯ ಮನಪಾ ಸದಸ್ಯರಾದ ಸಂಧ್ಯಾ ಮೋಹನ್ ಆಚಾರ್, ಪಾಲಿಕೆ ನಾಮ ನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಮಾಜಿ ಕಾರ್ಪೋರೇಟರ್ ಹೇಮಲತಾ ಪ್ರಭು,ಬಿಜೆಪಿ ಮುಖಂಡರಾದ ವೆಂಕಟೇಶ ಆಚಾರ್,ಮೋಹನ್ ಆಚಾರ್, ವಸಂತ್ ಶೇಟ್, ಶ್ರೀನಿವಾಸ್ ಶೇಟ್, ಮಹೇಶ್ ಕುಂದರ್, ಉಮಾನಾಥ್ ಶೆಟ್ಟಿಗಾರ್, ಪುರುಷೋತ್ತಮ ಪ್ರಭು, ಪ್ರಶಾಂತ್, ಗೋಕುಲ್ ದಾಸ್ ಭಟ್,ಅರ್ಶಾದ್ ಪೋಪಿ, ರೋಶನ್ ರೊನಾಲ್ಡ್, ಮಂಗಲ್ಪಾಡಿ ಗುರುರಾಜ್ ಶೆಣೈ, ಶ್ರೀರಾಮ್ ಪೈ ಮುಂತಾದವರು ಉಪಸ್ಥಿತರಿದ್ದರು.