Tuesday, September 27, 2022
Homeಇವೆಂಟ್ಸ್ಕಂಚಿನ ಪದಕ ಗೆದ್ದ ಗುರುರಾಜ್ ಪೂಜಾರಿಗೆ ಮಂಗಳೂರನಲ್ಲಿ ಸ್ವಾಗತ.

ಕಂಚಿನ ಪದಕ ಗೆದ್ದ ಗುರುರಾಜ್ ಪೂಜಾರಿಗೆ ಮಂಗಳೂರನಲ್ಲಿ ಸ್ವಾಗತ.

- Advertisement -
Renault

Renault

Renault

Renault


- Advertisement -

ಮಂಗಳೂರು: ಇಂಗ್ಲೆಂಡ್‌ನ ಬರ್ಮಿಂಗ್ ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್ -2022 ವೇಟ್‌ ಲಿಫ್ಟಿಂಗ್‌ನಲ್ಲಿ ಕಂಚಿನ ಪದಕ ಗೆದ್ದು ತವರಿಗೆ ಬಂದ ಕುಂದಾಪುರದ ಗುರುರಾಜ್ ಪೂಜಾರಿ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಭಾನುವಾರ ಸ್ವಾಗತಿಸಲಾಯಿತು.

ಸಂಸದ ನಳಿನ್ ಕುಮಾರ್ ಕಟೀಲ್‌, ಶಾಸಕರಾದ ಡಾ.ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್ ಆತ್ಮೀಯವಾಗಿ ಅಭಿನಂದಿಸಿದರು. ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಿ.ವೀರೇಂದ್ರ ಹೆಗ್ಗಡೆ ಅವರೂ ಅಭಿನಂದಿಸಿದರು.

ಕಾಮನ್ ವೆಲ್ತ್ ಗೇಮ್ಸ್ -2022ರಲ್ಲಿ ವೇಟ್‌ಲಿಫ್ಟಿಂಗ್‌ನಲ್ಲಿ 61 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿ ಕಂಚಿನ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಗುರುರಾಜ್ ಸತತ ಎರಡನೇ ಬಾರಿಗೆ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪಾಲ್ಗೊಂಡಿದ್ದಾರೆ. ಕಳೆದ ಬಾರಿ ಪುರುಷರ 56 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿರುವ ಅವರು ಬೆಳ್ಳಿಯ ಪದಕ ಗೆದ್ದಿದ್ದರು.

- Advertisement -


LEAVE A REPLY

Please enter your comment!
Please enter your name here

- Advertisment -

Most Popular

Recent Comments