ಬೆಂಗಳೂರು: ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ಗೆ ಕಾನೂನು ಸಂಕಷ್ಟ ಎದುರಾಗಿದೆ.
ಸಂಚಾರ ದಟ್ಟಣೆ ಮಧ್ಯೆ ಗೋಲ್ಡನ್ ಅವಧಿಯಲ್ಲಿ ಆಂಬುಲೆನ್ಸ್‌ಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲು ‘ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ಆಂಬುಲೆನ್ಸ್ ನಿರ್ವಹಣಾ ವ್ಯವಸ್ಥೆ’ ಜಾರಿಗೆ ಕರೆಯಲಾಗಿದ್ದ 1,800 ಕೋಟಿ ರೂ. ಮೊತ್ತದ ಟೆಂಡರ್ ಅನ್ನು ಆರೋಗ್ಯ ಸಚಿವ ಸುಧಾಕರ್ ಸೂಚನೆ ಮೇರೆಗೆ ರದ್ದುಪಡಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಭಾರತ್ ಪುನರುತ್ಥಾನ ಟ್ರಸ್ಟ್ ಪಿಐಎಲ್ ಸಲ್ಲಿಸಿತ್ತು.
ಈ ಪ್ರಕರಣದ ಅರ್ಜಿಯನ್ನು ಗುರವಾರ ವಿಚಾರಣೆ ನಡೆಸಿದ ಹೈಕೋರ್ಟ್, ಆರೋಗ್ಯ ಸಚಿವರನ್ನು ಅರ್ಜಿಯಲ್ಲಿ ಪ್ರತಿವಾದಿಯನ್ನಾಗಿ ಮಾಡಿದೆ.
ಸಚಿವರ ಪರ ನೋಟಿಸ್ ಸ್ವೀಕರಿಸುವಂತೆ ಹೆಚ್ಚುವರಿ ಅಡ್ವೋಕೇಟ್ ಜನರಲ್‌ಗೆ ಸೂಚನೆ ನೀಡಿದ್ದು, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶಿಸಿ ವಿಚಾರಣೆಯನ್ನ ಮುಂದೂಡಿದೆ.