ಬೆಂಗಳೂರು: ವಿಧಾನ ಪರಿಷತ್ತಿನ ನೂತನ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಸಭಾಪತಿಯಾಗಿ ಅಧಿಕಾರ ಸ್ವೀಕರಿಸಿದ ಹೊರಟ್ಟಿ ಅವರು ನಿನ್ನೆ ರಾತ್ರಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಸಭಾಪತಿಯಾಗಲು ಬೆಂಬಲಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
ನಿನ್ನೆ ರಾತ್ರಿ ಹೊರಟ್ಟಿಯವರನ್ನು ತಮ್ಮ ಮನೆಗೆ ಊಟಕ್ಕೆ ಆಹ್ವಾನಿಸಿದ್ದ ಮುಖ್ಯಮಂತ್ರಿ ಶುಭಾಶಯಗಳನ್ನು ತಿಳಿಸಿದ್ದಾರೆ. ಇಂದು ಮಾಜಿ ಸಿಎಂ ಹೆಚ್. ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಹೊರಟ್ಟಿ ಅವರು ಸಭಾಪತಿಯಾಗಲು ಬೆಂಬಲಿಸಿದ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
ಕುಮಾರಸ್ವಾಮಿ ಅವರು ಶುಭಾಶಯಗಳನ್ನು ತಿಳಿಸಿದ್ದಾರೆ.