- Advertisement -
ಕಡಬ: ಹೊಸ್ಮಠ ಸೇತುವೆಯ ಬಳಿ ಅವೈಜ್ಞಾನಿಕವಾಗಿ ಅಳವಡಿಸಲಾಗಿರುವ ಹಂಪ್ ನಿಂದಾಗ ಮಹಿಳೆಯೋರ್ವರು ಮೃತಪಟ್ಟ ಘಟನೆ ನಡೆದಿದೆ.
ಮೃತ ಮಹಿಳೆಯನ್ನು ವೇಣೂರಿನ ಬಜಾಲು ಸಮೀಪದ ವಿರಂದಲೆ ನಿವಾಸಿ ವೆಂಕಪ್ಪ ಸಾಲ್ಯಾನ್ ಎಂಬವರ ಪತ್ನಿ ಸುಂದರಿ (65 ವ) ಎಂದು ಗುರುತಿಸಲಾಗಿದೆ.
ಮೃತ ಮಹಿಳೆಯು ತನ್ನ ಮೊಮ್ಮಗನೊಂದಿಗೆ ನಿನ್ನೆ ಬೆಳಗಿನ ಜಾವ ವೇಣೂರಿನಿಂದ ಕಡಬಕ್ಕೆಂದು ಹೊರಟಿದ್ದು, ಬೆಳಿಗ್ಗೆ 6.30ರ ಸುಮಾರಿಗೆ ಮಂಜು ಆವರಿಸಿದ್ದರಿಂದ ಹಂಪ್ ಗೋಚರಿಸದೆ ಬೈಕ್ ಸ್ಕಿಡ್ ಆಗಿದ್ದು, ರಸ್ತೆಗೆಸೆಯಲ್ಪಟ್ಟ ಸುಂದರಿಯವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ.