Monday, January 17, 2022
Homeಕ್ರೈಂಪದೇ ಪದೇ ತವರು ಮನೆಗೆ ಹೋಗುತ್ತಿದ್ದ ಕಾರಣಕ್ಕೆ ಪತ್ನಿಯನ್ನೇ ಮುಗಿಸಿದ ಪಾಪಿ ಪತಿ!!!

ಪದೇ ಪದೇ ತವರು ಮನೆಗೆ ಹೋಗುತ್ತಿದ್ದ ಕಾರಣಕ್ಕೆ ಪತ್ನಿಯನ್ನೇ ಮುಗಿಸಿದ ಪಾಪಿ ಪತಿ!!!

- Advertisement -
Renault


- Advertisement -

ಕಲಬುರಗಿ : ಪದೇ ಪದೇ ತವರು ಮನೆಗೆ ಪತ್ನಿ ಹೋಗುತ್ತಿದ್ದಕ್ಕೆ ಕೋಪಗೊಂಡ ಪತಿ, ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಈ ಘಟನೆ ಇಲ್ಲಿಯ ಓಜಾ ಲೇಔಟ್ ನಲ್ಲಿ ನಡೆದಿದ್ದು, ಆರತಿ ರಾಠೋಡ(28) ಪತಿಯಿಂದಲೇ ಹತ್ಯೆಯಾದ ದುರ್ದೈವಿ. 9 ವರ್ಷಗಳ ಹಿಂದೆಯೇ ತಾರಾಸಿಂಗ್ ಎಂಬ ವ್ಯಕ್ತಿಯೊಂದಿಗೆ ಆರತಿ ವಿವಾಹವಾಗಿದ್ದರು.

ಆದರೆ, ಆರತಿ ತವರು ಮನೆಗೆ ಹೆಚ್ಚಾಗಿ ಹೋಗುತ್ತಿದ್ದರು. ಈ ವಿಷಯವಾಗಿ ಇಬ್ಬರ ಮಧ್ಯೆ ಆಗಾಗ ಜಗಳ ಕೂಡ ನಡೆಯುತ್ತಿತ್ತು ಎನ್ನಲಾಗಿದೆ.

ಸಂಕ್ರಮಣಕ್ಕಾಗಿ ಕೂಡ ಆರತಿ ತವರು ಮನೆಗೆ ಹೋಗಲು ಸಿದ್ಧರಾಗಿದ್ದರು. ಈ ವಿಷಯವಾಗಿ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದಿದೆ. ಇದು ವಿಕೋಪಕ್ಕೆ ತೆರಳುತ್ತಿದ್ದಂತೆ ತಾರಾಸಿಂಗ್, ಪತ್ನಿ ಮಲಗಿದ್ದ ಸಂದರ್ಭದಲ್ಲಿ ಅವರ ತಲೆಯ ಮೇಲೆ ಸಿಲಿಂಡರ್ ಎತ್ತಿ ಹಾಕಿದ್ದಾನೆ. ತೀವ್ರ ರಕ್ತಸ್ರಾವವಾಗಿ ಪತ್ನಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಈ ಕುರಿತು ವಿಶ್ವವಿದ್ಯಾಲಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.

- Advertisement -Home Plus


LEAVE A REPLY

Please enter your comment!
Please enter your name here

- Advertisment -

Most Popular

Recent Comments