Sunday, September 24, 2023
Homeರಾಜಕೀಯಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಭೇಟಿ

ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಭೇಟಿ

- Advertisement -



Renault

Renault
Renault

- Advertisement -

ಬೆಂಗಳೂರು: ಹೊಸಕೋಟೆ ವಿಧಾನಸಭೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.

ಸದಾಶಿವ ನಗರದಲ್ಲಿರವ ಡಿ ಕೆ ಶಿವಕುಮಾರ್ ಅವರ ನಿವಾಸದಲ್ಲಿ ಬುಧವಾರ ಬೆಳಗ್ಗೆ ಶರತ್ ಬಚ್ಚೇಗೌಡ ಮಾತುಕತೆ ನಡೆಸಿದರು.

ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ಸೇರುವುದು ಇದೀಗ ಅಧಿಕೃತವಾಗಿದೆ. ಗುರುವಾರ ( ಫೆ.25) ಅವರು ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಪಕ್ಷತ ಇತರೆ ಮುಖಂಡರ ಸಮ್ಮುಖದಲ್ಲಿ ಗುರುವಾರ ಶರತ್ ಕೈ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ಶರತ್ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೊಸಕೋಟೆ ಕ್ಷೇತ್ರದಿಂದ ಎಂಟಿಬಿ ನಾಗರಾಜ್ ವಿರುದ್ಧ ಬಿಜೆಪಿಯಿಂದ ಟಿಕೆಟ್ ಪಡೆದು ಸ್ಪರ್ಧಿಸಿ ಸೋತಿದ್ದರು. ಆದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಹೊಸಕೋಟೆ ಕ್ಷೇತ್ರಕ್ಕೆ ಬಡೆದ ಉಪಚುನಾವಣೆ ಸಂದರ್ಭದಲ್ಲಿ ಬಿಜೆಪಿ ಶರತ್ ಬಚ್ಚೇಗೌಡ ಬದಲಿಗೆ ಎಂಟಿಬಿ ನಾಗರಾಜ್ ಗೆ ಟಿಕೆಟ್ ನೀಡಿತ್ತು. ಈ ಸಂದರ್ಭದಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿದ್ದ ಶರತ್ ಜಯ ಗಳಿಸಿದ್ದರು.

- Advertisement -

LEAVE A REPLY

Please enter your comment!
Please enter your name here

Most Popular

Recent Comments