ಮಂಗಳೂರು: ಅನಿವಾಸಿ ಭಾರತೀಯರು ಸಂಘಟಿಸಿರುವ Indian Overseas Congress (IOC) ಶುಕ್ರವಾರ (ಫೆಬ್ರವರಿ 19) ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಯಲಿದೆ.
ಈ ಸಭೆಯು ದ.ಕ.ಜಿಲ್ಲಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್ ಅವರ ನೇತೃತ್ವದಲ್ಲಿ ನಡೆಯಲಿದೆ.
ಈ ಸಭೆಯಲ್ಲಿ ಭಾರತೀಯ ಅನಿವಾಸಿ ಕಾಂಗ್ರೆಸ್ ರಾಷ್ಟ್ರೀಯ ಉಸ್ತುವಾರಿ ಇಕ್ಬಾಲ್ ಕಾವೂರು.
ವಿಚಾರ ಮಂಡನೆ ಮಾಡಲಿದ್ದಾರೆ.
ಇದೇ ಕಾರ್ಯಕ್ರಮದಲ್ಲಿ ಪಕ್ಷದ ಆಂತರಿಕ ಚುನಾವಣೆಯಲ್ಲಿ ವಿಜೇತರಾದ ಇಂಡಿಯನ್ ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲುಕ್ ಮ್ಯಾನ್ ಬಂಟ್ವಾಳ್,ಇಂಡಿಯನ್ ಯೂತ್ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಗಿರೀಶ್ ಶೆಟ್ಟಿ, ಯೂತ್ ಕಾಂಗ್ರೆಸ್ ರಾಜ್ಯ ಸೆಕ್ರೆಟರಿ ಮೆರಿಲ್ ರೇಗೋ ಮತ್ತಿತರರು ಸನ್ಮಾನಗೊಳ್ಳಲಿದ್ದಾರೆ.
ಸೌದಿ ಅರೇಬಿಯಾದಲ್ಲಿ ರೂಪುಗೊಂಡಿರುವ IOC ಯ ಯಶಸ್ವಿ ಕಾರ್ಯಕ್ರಮಗಳ ಭಾಗವಾಗಿ ಸನ್ಮಾನ ನಡೆಯಲಿದೆ. ಕಾರ್ಯಕರ್ತರ ಸಭೆಯಲ್ಲಿ ಸಮಗ್ರ ಅಭಿಪ್ರಾಯ ಕ್ರೋಡೀಕರಣದ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಲಾಗಿದೆ.
ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಬಿ. ರಮಾನಾಥ ರೈ, ಯು. ಟಿ.ಖಾದರ್, ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಶಕುಂತಲಾ ಶೆಟ್ಟಿ, ಮೊಯಿದಿನ್ ಬಾವಾ,ವಸಂತ ಬಂಗೇರ, ಮಾಜಿ ಎಂಎಲ್ಸಿ ಐವನ್ ಡಿಸೋಜಾ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಕಾಂಗ್ರೆಸ್ ಮುಖಂಡರಾದ ಆರ್. ರಘು, ಮಿಥುನ್ ರೈ, ಮೊದಲಾದವರು ಅತಿಥಿಗಳಾಗಿ ಆಗಮಿಸಲಿದ್ದಾರೆ.
ವಿವಿಧ ಅನಿವಾಸಿ ಭಾರತೀಯ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ಹಿತೈಷಿಗಳು ಮತ್ತಿತರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.