Tuesday, September 27, 2022
Homeಕ್ರೈಂಅಮಾನವೀಯ ವರ್ತನೆ: ಎದೆಗೆ ಒದ್ದು ಬಸ್ಸಿನಿಂದ ಪ್ರಯಾಣಿಕನ ಹೊರಹಾಕಿದ KSRTC ಬಸ್ ಕಂಡೆಕ್ಟರ್,ಅಮಾನತು !!!

ಅಮಾನವೀಯ ವರ್ತನೆ: ಎದೆಗೆ ಒದ್ದು ಬಸ್ಸಿನಿಂದ ಪ್ರಯಾಣಿಕನ ಹೊರಹಾಕಿದ KSRTC ಬಸ್ ಕಂಡೆಕ್ಟರ್,ಅಮಾನತು !!!

- Advertisement -
Renault

Renault

Renault

Renault


- Advertisement -

ಬೆಂಗಳೂರುಪ್ರಯಾಣಿಕನ ಎದೆಗೆ ಒದ್ದು ಬಸ್ಸಿನಿಂದ ಹೊರಹಾಕಿ ಕೆಎಸ್‌ಆರ್ಟಿಸಿ ಬಸ್ ಕಂಡೆಕ್ಟರ್ ಅಮಾನವೀಯವಾಗಿ ವರ್ತಿಸಿರುವ ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ.

ನಿನ್ನೆ ಸಂಜೆ ಕರ್ತವ್ಯ ನಿರ್ವಹಿಸಿದ್ದ ಕಂಡಕ್ಟರ್ ಸುಖರಾಜ ರೈ ಬಿಲ್ಲೆ ಪುತ್ತೂರು ತಾಲೂಕಿನ ಈಶ್ವರ ಮಂಗಲದಲ್ಲಿ ಓರ್ವ ಮದ್ಯಪಾನ ಮಾಡಿದ ಪ್ರಯಾಣಿಕರನ್ನು ವಾಹನದಿಂದ ಕೆಳಗಡೆಗೆ ಇಳಿಸುವಾಗ ಅಮಾನವೀಯವಾಗಿ ವರ್ತಿಸಿದ್ದಾರೆ.

ಇದನ್ನು ಸ್ಥಳೀಯರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು ವಿಡಿಯೋ ನೋಡಿದ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಕಂಡೆಕ್ಟರ್ ನನ್ನು ಈಗಾಗಲೇ ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ. ನಿಗಮದ ಚಾಲನಾ ಸಿಬ್ಬಂದಿಗಳಿಗೆ ಸಾರ್ವಜನಿಕ ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ನಿರಂತರ ತರಬೇತಿ ಹಾಗೂ ತಿಳುವಳಿಕೆ ನೀಡಿದ್ದಾಗ್ಯೂ ಸಹ ಈ ರೀತಿಯ ಘಟನೆ ನಡೆದಿರುವುದು ದುಃಖದ ಸಂಗತಿ ಎಂದು ಪುತ್ತೂರು ಕೆಎಸ್‌ಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ತಿಳಿಸಿದ್ದಾರೆ.

ನಿಗಮದ ಸಿಬ್ಬಂದಿಗಳಿಗೆ‌ ಇನ್ನೂ‌ ಹೆಚ್ಛಿನ ತರಬೇತಿ ನೀಡಿ ಪ್ರಯಾಣಿಕರೊಡನೆ ಸೌಜನ್ಯವಾಗಿ ವರ್ತಿಸುವ ಸಂಬಂಧ ಕ್ರಮ ಕೈಗೊಳ್ಳಲಾಗುವುದು ಹಾಗೂ ಈ ರೀತಿಯ ಘಟನೆಗಳಿಗೆ ಕಾರಣರಾಗುವ ಸಿಬ್ಬಂದಿಗಳ ಮೇಲೆ ಕಠಿಣ ಕ್ರಮ ಜರುಗಿಸುವ ಎಚ್ಚರಿಕೆಯನ್ನು ನೀಡಿದ್ದಾರೆ. ಸದರಿ‌ ಪ್ರಯಾಣಿಕರ ವೈದ್ಯಕೀಯ ವೆಚ್ಚವನ್ನು ನಿಗಮವು ಭರಿಸಲಿದೆ. ನಿಗಮವು ಈ ಘಟನೆಗೆ ತೀವ್ರ ವಿಷಾದ ವ್ಯಕ್ತಪಡಿಸುತ್ತದೆ ಎಂದು ಪತ್ರಿಕಾ ಪ್ರಕಟನೆ ನೀಡಿದೆ.

- Advertisement -


LEAVE A REPLY

Please enter your comment!
Please enter your name here

- Advertisment -

Most Popular

Recent Comments