Friday, May 14, 2021
Homeಕ್ರೀಡೆಕೋವಿಡ್ ಸೋಂಕು: ಐಪಿಎಲ್-2021 ತಾತ್ಕಾಲಿಕ ಸ್ಥಗಿತ ಬಿಸಿಸಿಐ

ಕೋವಿಡ್ ಸೋಂಕು: ಐಪಿಎಲ್-2021 ತಾತ್ಕಾಲಿಕ ಸ್ಥಗಿತ ಬಿಸಿಸಿಐ

- Advertisement -
Rental
Rental
- Advertisement -Home Plus
- Advertisement -
Platform
Maya Builders

ನವದೆಹಲಿ: ಪ್ರಸಕ್ತ ಸಾಲಿನ ಐಪಿಎಲ್‌ ಟೂರ್ನಿಯನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಿರುವುದಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಿಳಿಸಿದೆ.

ಹಲವಾರು ಆಟಗಾರರು ಮತ್ತು ಸಹಾಯಕ ಸಿಬ್ಬಂದಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿರುವ ಕಾರಣ ಪಂದ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದಾಗಿ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮತ್ತು ಐಪಿಎಲ್ ಅಧ್ಯಕ್ಷ ಬ್ರಿಜೇಶ್ ಪಟೇಲ್ ಮಾಹಿತಿ ನೀಡಿದ್ದಾರೆ.

ಕೋಲ್ಕತ್ತ ನೈಟ್‌ ರೈಡರ್ಸ್ ತಂಡದ ಆಟಗಾರರಾದ ವರುಣ್ ಚಕ್ರವರ್ತಿ ಮತ್ತು ಸಂದೀಪ್ ವಾರಿಯರ್ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದರಿಂದ ಸೋಮವಾರ ನಡೆಯಬೇಕಿದ್ದ ಆರ್‌ಸಿಬಿ-ಕೆಕೆಆರ್ ನಡುವಣ ಪಂದ್ಯ ಮುಂದೂಡಿಕೆಯಾಗಿತ್ತು. ಇದಾದ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ಬೌಲಿಂಗ್ ಕೋಚ್ ಎಲ್.ಬಾಲಾಜಿ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಗೊತ್ತಾಗಿತ್ತು. ಎರಡೆರಡು ಬಾರಿ ನಡೆಸಿದ ಪರೀಕ್ಷೆಯಲ್ಲಿಯೂ ಅವರಿಗೆ ಸೋಂಕು ದೃಢಪಟ್ಟಿತ್ತು.

ಮುಂಬೈ ಇಂಡಿಯನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಣ ಇಂದಿನ ಪಂದ್ಯ ನಡೆಯಲಿದೆ ಎಂದೇ ಹೇಳಲಾಗಿತ್ತು. ಆದರೆ ಅಷ್ಟರಲ್ಲೇ ಸನ್‌ರೈಸರ್ಸ್ ಹೈದರಾಬಾದ್ ತಂಡದ ಆಟಗಾರ ವೃದ್ಧಿಮಾನ್ ಸಹಾ ಅವರಿಗೂ ಸೋಂಕು ತಗುಲಿರುವುದು ದೃಢಪಟ್ಟಿತು. ಮುಂಜಾಗೃತಾ ಹಿನ್ನೆಲೆ ಬಿಸಿಸಿಐ ಐಪಿಎಲ್ ಪಂದ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

- Advertisement -Hunger

LEAVE A REPLY

Please enter your comment!
Please enter your name here

- Advertisment -

Most Popular

Recent Comments