Tuesday, September 28, 2021
Homeಕ್ರೈಂಹದಿಹರೆ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿ...

ಹದಿಹರೆ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿ ನ್ಯಾಯಾಲಯದಿಂದ ಆದೇಶ…

- Advertisement -
Renault
- Advertisement -
Home Plus
- Advertisement -

ಮಂಗಳೂರು : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಸತ್ರ ಮತ್ತು ತ್ವರಿತಗತಿ ನ್ಯಾಯಾಲಯವು, ಪೊಕ್ಸೋ ಅಡಿಯಲ್ಲಿ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ. ಬೆಳ್ತಂಗಡಿ ತಾಲೂಕು ಶಿಬಾಜೆ ಗ್ರಾಮದ ನವೀನ್ (27) ಶಿಕ್ಷೆಗೊಳಗಾದ ಆರೋಪಿಯಾಗಿದ್ದಾನೆ.

ಅಪರಾಧಿ ನವೀನ್‌ ಈ ಹಿಂದೆ 2017 ರಲ್ಲಿ ಈ ಪ್ರಕರಣದ ಸಂತ್ರಸ್ತೆಯ ಅಕ್ಕನ ಮೇಲೆ ಅತ್ಯಾಚಾರವೆಸಗಿದ್ದು, ಅದರಲ್ಲೂ ಯುವತಿ ಗರ್ಭವತಿಯಾಗಿದ್ದಳು. ಬಂಧಿಸಲ್ಪಟ್ಟಿದ್ದ ಆರೋಪಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದನು. ಆ ವೇಳೆ ಯುವತಿ ವಯಸ್ಕಳಾದಾಗ ಆಕೆಯನ್ನೇ ವಿವಾಹವಾಗಿದ್ದನು. ವಿವಾಹವಾದ ಅನಂತರ ಆಕೆಯ ತಂಗಿ ಅಪ್ರಾಪ್ತ ಬಾಲಕಿಯ ಮೇಲೆಯೂ ಹಲವು ಬಾರಿ ಅತ್ಯಾಚಾರವೆಸಗಿದ್ದನು.

ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಬಗ್ಗೆ 2019 ರ ಜೂನ್ 27 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅತ್ಯಾಚಾರದ ಪರಿಣಾಮವಾಗಿ ಬಾಲಕಿ ಗರ್ಭಿಣಿಯಾಗಿದ್ದಳು. ಅನಂತರ ಗರ್ಭಪಾತವಾಗಿತ್ತು. ಬೆಳ್ತಂಗಡಿಯ ಅಂದಿನ ಪ್ರೊಬೆಷನರಿ ಡಿವೈಎಸ್‌ಪಿ, ಪ್ರಭಾರ ವೃತ್ತನಿರೀಕ್ಷಕ ಗೋವಿಂದ ರಾಜು ಬಿ. ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಸಿ.ವೆಂಕಟರಮಣ ಸ್ವಾಮಿ ವಾದಿಸಿದ್ದಾರೆ. ಸಾಕ್ಷಿಗಳ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಾವಿತ್ರಿ ವಿ.ಭಟ್ ಆರೋಪಿ ತಪ್ಪಿತಸ್ಥನೆಂದು ತೀರ್ಮಾನಿಸಿ ಅತ್ಯಾಚಾರ ಅಪರಾಧಕ್ಕೆ 7 ವರ್ಷ ಕಠಿಣ ಸಜೆ ಮತ್ತು 5,000 ರೂಪಾಯಿ ದಂಡ ಹಾಗೂ ಪೊಕ್ಸೋ ಕಾಯಿದೆಯ ಕಲಂನಡಿ 10 ವರ್ಷ ಕಠಿಣ ಶಿಕ್ಷೆ ಮತ್ತು 5,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

- Advertisement -

LEAVE A REPLY

Please enter your comment!
Please enter your name here

- Advertisment -

Most Popular

Recent Comments