Tuesday, September 27, 2022
Homeಅಪಘಾತಕಲ್ಲಾಪು: ಪಾದಚಾರಿಗೆ ಲಾರಿ ಢಿಕ್ಕಿ >> ವ್ಯಕ್ತಿ ಸ್ಥಳದಲ್ಲೇ ಮೃತ್ಯು

ಕಲ್ಲಾಪು: ಪಾದಚಾರಿಗೆ ಲಾರಿ ಢಿಕ್ಕಿ >> ವ್ಯಕ್ತಿ ಸ್ಥಳದಲ್ಲೇ ಮೃತ್ಯು

- Advertisement -
Renault

Renault

Renault

Renault


- Advertisement -

ಮಂಗಳೂರು, ಸೆ. 03. ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ಇಲ್ಲಿನ ಕಲ್ಲಾಪು ಮಾರುಕಟ್ಟೆಯ ಬಳಿ ಇಂದು ಬೆಳಗ್ಗೆ ನಡೆದಿದೆ.

ಮೃತರನ್ನು ಬೆಂಗರೆ ನಿವಾಸಿ ಪ್ರಸ್ತುತ ಕಲ್ಲಾಪುವಿನಲ್ಲಿ ನೆಲೆಸಿರುವ ಬೆಂಗರೆ ನಿಯಾಝ್ ಬಾವಾ ( 40) ಎಂದು ಗುರುತಿಸಲಾಗಿದೆ.

ಇವರು ಕಲ್ಲಾಪು ಮಾರುಕಟ್ಟೆಯಲ್ಲಿ ಕೆಎಂ ಫಾರೂಕ್ ಎಂಬವರ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಇಂದು ಬೆಳಗ್ಗಿನ ಜಾವ 4.10ರ ಸುಮಾರಿಗೆ ಮನೆಯಿಂದ ನಡೆದುಕೊಂಡು ಹೋಗುತ್ತಿದ್ದ ವೇಳೆ ಕೇರಳದಿಂದ ಮಂಗಳೂರಿಗೆ ಬರುತ್ತಿದ್ದ ಲಾರಿಯೊಂದು ವೇಗವಾಗಿ ಬಂದು ಹಿಂದಿನಿಂದ ಡಿಕ್ಕಿ ಹೊಡೆದಿದ್ದು, ಪರಿಣಾಮ ಲಾರಿಯ ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ, ಈ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಪಘಾತದ ಬಳಿಕ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದು, ಕ್ಲೀನರ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

- Advertisement -


LEAVE A REPLY

Please enter your comment!
Please enter your name here

- Advertisment -

Most Popular

Recent Comments