Thursday, October 6, 2022
Homeಅಪಘಾತಕಾಪು: ಸ್ಕೂಟಿ - ಟ್ಯಾಂಕರ್‌ ಢಿಕ್ಕಿ >> ಸವಾರನಿಗೆ ಗಂಭೀರ ಗಾಯ

ಕಾಪು: ಸ್ಕೂಟಿ – ಟ್ಯಾಂಕರ್‌ ಢಿಕ್ಕಿ >> ಸವಾರನಿಗೆ ಗಂಭೀರ ಗಾಯ

- Advertisement -
Renault

Renault

Renault

- Advertisement -

ಕಾಪು: ರಾ. ಹೆ. 66ರ ಕೋತಲಕಟ್ಟೆ ಬಳಿ ಕಾಪುವಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಸ್ಕೂಟಿಗೆ ಟ್ಯಾಂಕರ್‌ ಢಿಕ್ಕಿ ಹೊಡೆದು ಸ್ಕೂಟಿ ಸವಾರ ಗಂಭೀರ ಗಾಯಗೊಂಡ ಘಟನೆ ಶನಿವಾರ ಸಂಜೆ ನಡೆದಿದೆ.

ಉಡುಪಿ ಕುಂಜಿಬೆಟ್ಟು ನಿವಾಸಿ ಸುಜಿತ್‌ ಆಚಾರ್ಯ (35) ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ.

ಕೋತಲಕಟ್ಟೆಯ ಬಬ್ಬು ಸ್ವಾಮಿ ದೈವಸ್ಥಾನದ ಬಳಿ ಟ್ಯಾಂಕರ್‌ ಚಾಲಕ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಸ್ಕೂಟರ್‌ಗೆ ಹಿಂದಿನಿಂದ ಢಿಕ್ಕಿ ಹೊಡೆದಿದ್ದು, ಪರಿಣಾಮ ಸ್ಕೂಟಿ ಸವಾರ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ.

ಸ್ಥಳೀಯರು ಗಾಯಾಳುವನ್ನು 108 ಆಯಂಬುಲೆನ್ಸ್‌ ವಾಹನದಲ್ಲಿ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು, ಅನಂತರ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

- Advertisement -


LEAVE A REPLY

Please enter your comment!
Please enter your name here

Most Popular

Recent Comments