- Advertisement -
ಕಾರ್ಕಳ, ಫೆ.10: ಕಾರ್ಕಳ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸುರೇಶ್ ಕುಮಾರ್ ಅವರು ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ. ಅಗ್ನಿಶಮನ, ರಕ್ಷಣಾ ಕಾರ್ಯ ಮತ್ತು ವಿಪತ್ತು ಸಂದರ್ಭಗಳಲ್ಲಿ ಅಸಾಧಾರಣ ಸೇವೆ ಸಲ್ಲಿಸಿರುವ ಸುರೇಶ್ ಕುಮಾರ್ ಅವರ ಸೇವೆಯನ್ನು ಪರಿಗಣಿಸಿ ಇಲಾಖೆಯು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮಂಗಳೂರು ನಿವಾಸಿಯಾಗಿರುವ ಇವರು 1997ರಲ್ಲಿ ಮೈಸೂರಿನ ಸರಸ್ವತಿಪುರ ಅಗ್ನಿಶಾಮಕ ಠಾಣೆಯಲ್ಲಿ ಕರ್ತವ್ಯಕ್ಕೆ ಸೇರಿದ್ದರು. 2012ರಲ್ಲಿ ಕಾರ್ಕಳ ಅಗ್ನಿಶಾಮಕ ಠಾಣೆಗೆ ವರ್ಗಾವಣೆ ಹೊಂದಿರುವ ಇವರು 24 ವರ್ಷಗಳ ಸೇವಾವಧಿಯಲ್ಲಿ ಸುಮಾರು 15ಕ್ಕೂ ಹೆಚ್ಚು ಇಲಾಖಾ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.