ಬೆಂಗಳೂರು : ಕರ್ನಾಟಕದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಸೆಮಿಸ್ಟರ್ ಪರೀಕ್ಷೆಗಳನ್ನು ರದ್ದುಗೊಳ್ಳುತ್ತದೆಯೇ ಎನ್ನುವ ಗೊಂದಲಗಳಿಗೆ ಉನ್ನತ ಶಿಕ್ಷಣ ಇಲಾಖೆ ಸ್ಪಷ್ಟನೆ ನೀಡಿದೆ.
ಯುಜಿ – ಪಿಜಿ ಪರೀಕ್ಷೆ ನಡೆಸುವ ಬಗ್ಗೆ ಸ್ಪಷ್ಟನೆ ನೀಡಿದ ಉನ್ನತ ಶಿಕ್ಷಣ ಇಲಾಖೆ, ಪರೀಕ್ಷೆ ನಡೆಸುವುದು ಪಕ್ಕಾ ಆಗಿದೆ. ಪರೀಕ್ಷೆಗೆ ಹೆಚ್ಚು ದಿನ ಅಂತರವಿದ್ದು, ಪರೀಕ್ಷೆಗೆ ಬೇಕಾದ ಎಲ್ಲಾ ತಯಾರಿಯನ್ನು ವಿವಿಗಳು ಮಾಡಿಕೊಳ್ಳುತ್ತಿದೆ. ಅದೇ ರೀತಿ ಜುಲೈ 5 ರೊಳಗೆ ಲಸಿಕೆ ನೀಡುವಂತೆ ಡಿಸಿಎಂ ಅಶ್ವಥ್ ನಾರಾಯಣ್ ಸೂಚನೆ ನೀಡಿದ್ದು, ಜುಲೈ 2 ನೇ ವಾರದಲ್ಲಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸುವುದಕ್ಕೆ ಉನ್ನತ ಶಿಕ್ಷಣ ಇಲಾಖೆಗೆ ಪ್ರಸ್ತಾವನೆ ಬಂದಿದೆ ಎಂದಿದೆ.
ಇನ್ನು ಈಗಾಗಲೇ ಕೆಲವು ವಿವಿಗಳು ಪರೀಕ್ಷೆಗೆ ಸರ್ಕಾರದ ಅನುಮತಿ ಕೇಳಿದ್ದು, ಇದಕ್ಕೆ ಸರ್ಕಾರ ಒಪ್ಪಿಗೆ ಸೂಚಿಸಿದರೆ ಜುಲೈ ಕೊನೆ ವಾರದಲ್ಲಿ ಪರೀಕ್ಷೆ ನಿಗದಿಯಾಗಲಿದೆ. ಒಟ್ಟಿನಲ್ಲಿ ರಾಜ್ಯದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಸೆಮಿಸ್ಟರ್ ಪರೀಕ್ಷೆಗಳನ್ನು ರದ್ದುಪಡಿಸಲು ಸಾಧ್ಯವಿಲ್ಲ ಎಂದು ಉನ್ನತ ಶಿಕ್ಷಣ ಇಲಾಖೆ ಸ್ಪಷ್ಟನೆ ನೀಡಿದೆ.
We are not ready to attend 5th(odd) semester exams.because already attended online classes about 6th(even) semester portions.we are all blinded on odd semester portions.please justice for diploma students.promote all students