Tuesday, September 28, 2021
Homeರಾಜಕೀಯಕರ್ನಾಟಕ ಸರಕಾರಕ್ಕೆ ಕೇರಳ ಹೈಕೋರ್ಟ್ ತರಾಟೆ…ಗಡಿನಾಡ ಸಂಚಾರ ತಡೆದ ಬಗ್ಗೆ ಸ್ಪಷ್ಟೀಕರಣಕ್ಕೆ ನೋಟೀಸ್…

ಕರ್ನಾಟಕ ಸರಕಾರಕ್ಕೆ ಕೇರಳ ಹೈಕೋರ್ಟ್ ತರಾಟೆ…ಗಡಿನಾಡ ಸಂಚಾರ ತಡೆದ ಬಗ್ಗೆ ಸ್ಪಷ್ಟೀಕರಣಕ್ಕೆ ನೋಟೀಸ್…

- Advertisement -
Renault
- Advertisement -
Home Plus
- Advertisement -

ಕೇರಳ ರಾಜ್ಯದಿಂದ ಕರ್ನಾಟಕ ತೆರಳುವವರಿಗೆ ರಸ್ತೆ ತಡೆ ಸಹಿತ ನಾಗರಿಕ ಸಂಚಾರದ್ ಅನುಮತಿ ನಿಷೇಧಿಸಿದ ಕರ್ನಾಟಕ ಸರಕಾರದ ಕ್ರಮ ಕೇಂದ್ರದ ಕೋವಿಡ್ ನಿಯಮಾವಳಿಯ ಉಲ್ಲಂಘನೆಯಾಗಿದ್ದು ಇಂತಹ ಅಮಾನವೀಯ ನಾಗರಿಕ ಹಕ್ಕು ಉಲ್ಲಂಘನೆ ಕುರಿತು ಸ್ಪಷ್ಟೀಕರಣ ನೀಡಬೇಕೆಂದು ಕರ್ನಾಟಕಕ್ಕೆ ಕೇರಳ ಹೈಕೋರ್ಟ್ ನೋಟೀಸು ಜಾರಿಗೊಳಿಸಿದೆ.

ಮಂಜೇಶ್ವರದ ಸಿ.ಪಿ.ಎಂ ಮುಖಂಡ, ಪಕ್ಷದ ಜಿಲ್ಲಾ ಸೆಕ್ರೇಟರಿಯೇಟ್ ಸದಸ್ಯ ಕೆ. ಆರ್. ಜಯಾನಂದ ಅವರು ನಾಗರಿಕ ಹಿತಾಸಕ್ತಿಯಿಂದ ಕೇರಳ ಹೈಕೋರ್ಟಿನಲ್ಲಿ ಹೂಡಿದ ದಾವೆ ಪರಿಗಣಿಸಿ ಕೇರಳ ಹೈಕೋರ್ಟ್ ಗಡಿಸಂಚಾರ ತಡೆದಿರುವುದನ್ನು ಪ್ರಶ್ನಿಸಿ ಕೇಂದ್ರ ಸಹಿತ ಕರ್ನಾಟಕ ಸರಕಾರಕ್ಕೆ ನೋಟೀಸು ಜಾರಿ ಮಾಡಿದೆ. ಇದರಂತೆ ಕರ್ನಾಟಕ ಸರಕಾರ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಕೇಂದ್ರ ಆರೋಗ್ಯ ಸಚಿವಾಲಯದ ಪ್ರತಿನಿಧಿಗಳು ಆಗಸ್ಟ್ 17 ರಂದು ಕೋರ್ಟಿಗೆ ಹಾಜರಾಗಿ ಅಧಿಕೃತ ಸಮಜಾಯಿಷಿ ನೀಡುವಂತೆ ಹೈಕೋರ್ಟ್ ನ ಮುಖ್ಯ ನ್ಯಾಯಾಧೀಶರನ್ನೊಳಗೊಂಡ ವಿಭಾಗೀಯ ಪೀಠ ಆದೇಶಿಸಿದೆ.

ಪ್ರಸ್ತುತ ಕೇರಳದಿಂದ ಯಾರೊಬ್ಬರು ಕರ್ನಾಟಕ ಪ್ರವೇಶಿಸುವುದಿದ್ದರೂ ಅವರು 72 ತಾಸುಗಳ ಒಳಗೆ ಪಡೆದ ಕೋವಿಡ್ ಆರ್.ಟಿ.ಪಿ.ಸಿ.ಆರ್ ಟೆಸ್ಟ್ನ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ ಹೊಂದಿರಬೇಕು, ಎರಡು ಡೋಸ್ ಲಸಿಕೆ ಪಡೆದವರಿಗೂ ವಿನಾಯಿತಿಗಳಿಲ್ಲ ಎಂಬುದು ಕರ್ನಾಟಕದ ಆದೇಶವಾಗಿತ್ತು. ಆದರೆ ಎರಡು ಡೋಸ್ ಲಸಿಕೆ ಪಡೆದವರ ಸಂಚಾರನುಮತಿ ನಿಷೇಧಿಸಕೂಡದೆಂದು ಕೇಂದ್ರ ಸರಕಾರ ಪದೇ ಪದೇ ಪುನರುಚ್ಛರಿಸಿದರೂ ಅದನ್ನೆಲ್ಲವನ್ನು ಕಡೆಗಣಿಸಿ ಕೇರಳ ಕರ್ನಾಟಕ ಗಡಿಯಲ್ಲಿ ಸಂಚಾರ ಸ್ವಾತಂತ್ರ್ಯ ನಿಷೇಧಿಸಲಾಗಿದೆ. ಈ ಜನ ದ್ರೋಹಿ ನಿಲುವನ್ನು ಖಂಡಿಸಿ ತಲಪಾಡಿಯಲ್ಲಿ ಸತ್ಯಾಗ್ರಹ ನಿರತರಾಗುವುದರ ಜತೆಯಲ್ಲೇ ಕೆ. ಆರ್. ಜಯಾನಂದರು ಕೋರ್ಟಿನ ಮೊರೆ ಕೂಡಾ ಹೋಗಿದ್ದರು. ಕರ್ನಾಟಕ ಸರಕಾರ ಪ್ರಸ್ತುತ ಪಾಲಿಸುತ್ತಿರುವ ಆದೇಶಗಳನ್ನು ಹಿಂತೆಗೆಯಬೇಕು, ಕೋವಿಡ್ ಲಸಿಕೆ ಪಡೆದವರಿಗೆ ಅಂತರ್ ರಾಜ್ಯ ಸಂಚಾರನುಮತಿ ನೀಡಬೇಕೆಂಬುದು ಅವರ ಬೇಡಿಕೆಯಾಗಿದೆ.

ಕಾಸರಗೋಡು ಭೂಭಾಗ ಶತಮಾನಗಳ ಹಿಂದೆ ಮದ್ರಾಸು ಪ್ರಾಂತ್ಯ, ಮೈಸೂರು ಪ್ರಾಂತ್ಯದ ಕಾಲದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಭಾಗ. ಶಿಕ್ಷಣ, ಆರೋಗ್ಯ, ಚಿಕಿತ್ಸೆ, ಉದ್ಯೋಗ, ಜೀವನ ಸಂಬಂಧ ಇತ್ಯಾದಿಗಳೊಂದಿಗೆ ಕರಾವಳಿಯೊಂದಿಗೆ ಭಾಂಧವ್ಯದ ಬೆಸುಗೆ ಹೊಂದಿದೆ. ಇದು ಸಾಮರಸ್ಯದ ಜೀವನಮೌಲ್ಯದ ಸಾಂಸ್ಕೃತಿಕ ಸಂಬಂಧವಾಗಿದೆ. ವರ್ತಮಾನದಲ್ಲಿ ಇದಕ್ಕೆಲ್ಲ ತಡೆಯೊಡ್ಡಲಾಗಿದೆ. ಗಡಿನಾಡಿನ ಬಾಂಧವ್ಯ ಕೆಡಿಸುವ ಮಾದರಿಯ ಈ ಧೋರಣೆ ಇದೇ ಮೊದಲಾಗಿದೆ. ಇದರಿಂದಾಗಿ ಗಡಿನಾಡ ಜನತೆಯ ಉದ್ಯೋಗ, ಶಿಕ್ಷಣ, ಚಿಕಿತ್ಸೆ ಇನ್ನಿತ್ಯಾದಿ ಮೂಲಭೂತ ಸೌಕರ್ಯಗಳಿಗೆ ಕೊರತೆಯಾಗಿದೆ. ಇದು ಸ್ಪಷ್ಟವಾದ ಮಾನವ ಹಕ್ಕು ಉಲ್ಲಂಘನೆಯಾಗಿದೆ. ಈ ಕುರಿತು ನ್ಯಾಯಾಲಯ ಮುತುವರ್ಜಿಯಿಂದ ಕಾನೂನು ವಿಧೇಯ ಕ್ರಮ ಕೈಗೊಳ್ಳಬೇಕೆಂದು ದೂರುದಾತರ ಪರವಾಗಿ ಹೈಕೋರ್ಟಿನಲ್ಲಿ ನ್ಯಾಯವಾದಿ ಪಿ. ವಿ. ಅನೂಪ್ ಹಾಜರಾಗಿ ನ್ಯಾಯ ಮಂಡಿಸಿದರೆಂದು ಮಾಹಿತಿ ದೊರಕಿದೆ.

- Advertisement -

LEAVE A REPLY

Please enter your comment!
Please enter your name here

- Advertisment -

Most Popular

Recent Comments