Monday, October 2, 2023
HomeUncategorizedಖಾಸಗಿ ದೇವಾಲಯ ನಮಗೆ ಬೇಡ: ಧಾರ್ಮಿಕ ಧತ್ತಿ ಸಚಿವ ಕೋಟಾ

ಖಾಸಗಿ ದೇವಾಲಯ ನಮಗೆ ಬೇಡ: ಧಾರ್ಮಿಕ ಧತ್ತಿ ಸಚಿವ ಕೋಟಾ

- Advertisement -



Renault

Renault
Renault

- Advertisement -

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯಿಂದ ನೀಡಲಾಗಿರುವ ಖಾಸಗಿ ಸುತ್ತೋಲೆಯಿಂದ ಖಾಸಗಿ ದೇವಸ್ಥಾನದವರು ಆತಂಕ ಪಡುವ ಅಗತ್ಯವಿಲ್ಲ.ಇದು ನಿರಂತರ ಪ್ರಕ್ರಿಯೆಯಾಗಿದೆ. ಖಾಸಗಿ ದೇವಸ್ಥಾನ ವಶಪಡಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವಸ್ಥಾನಗಳನ್ನು ನೋಂದಣಿ ಮಾಡಿಕೊಳ್ಳಬೇಕೆಂದು 2015 ರಲ್ಲಿ ಧಾರ್ಮಿಕ ದತ್ತಿ ಕಾಯಿದೆ ತಿದ್ದುಪಡಿ ತರಲಾಗಿದೆ. ಸರ್ಕಾರ ಖಾಸಗಿ ದೇವಸ್ಥಾನಗಳ ಮೇಲೆ ಸರ್ಕಾರ ಹಕ್ಕು ಚಲಾಯಿಸುವುದಾಗಲಿ, ನಿಗಾ ಇಡುವುದಾಗಲಿ, ಸ್ವಾಯತ್ತ ತೆಗೆದುಕೊಳ್ಳುವುದಾಗಲಿ ಅಲ್ಲ. ನೋಂದಣಿ ಪ್ರಕ್ರಿಯೆಯ ನೆನಪಿನ ಸುತ್ತೋಲೆ ಕೊಟ್ಟಿದ್ದೇವೆ ಅಷ್ಟೇ ಎಂದರು.

ಖಾಸಗಿ ದೇವಸ್ಥಾನ ಸ್ವಾಯತ್ತ ಪಡೆಯುವ ಯಾವುದೇ ಪ್ರಸಂಗವಿಲ್ಲ.

ಖಾಸಗಿ ದೇವಸ್ಥಾನ ವಶಪಡಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಆತಂಕ ಬೇಡ ಎಂದು ಅವರು ಸ್ಪಷ್ಟಪಡಿಸಿದರು.

2011ರಲ್ಲಿ ಈ ಬಗ್ಗೆ ಕಾಯ್ದೆ ತಂದಿರುವುದು 2015 ರಲ್ಲಿ ಜಾರಿ ಮಾಡಿದ್ದಾರೆ. 2016,17,18,19,20 ರಲ್ಲಿ ನೆನಪಿನ ಸುತ್ತೋಲೆ ಕೊಡುತ್ತಾ ಬಂದಿದ್ದೇವೆ. ಮೊನ್ನೆ ಸಹ ಅಂತಹ ಸುತ್ತೋಲೆ ಕೊಟ್ಟಿದ್ದೇವೆ. ನನ್ನ ಗಮನಕ್ಕೆ ಬಾರದೆ ಇದು ಸಾಮಾನ್ಯ ಪ್ರಕ್ರಿಯೆ ರೀತಿ ಸುತ್ತೋಲೆ ಕಳುಹಿಸಲಾಗಿದೆ. ಇದರಲ್ಲಿ ಖಾಸಗಿ ದೇವಸ್ಥಾನಗಳ ಸ್ವಾಧೀನ ಮಾಡಿಕೊಳ್ಳುವ ಪ್ರಶ್ನೆ ಇಲ್ಲ. ಸುತ್ತೋಲೆ ವಾಪಸ್ ತೆಗೆದುಕೊಳ್ಳಬೇಕೆಂದು ಯಾರಾದರೂ ಹೇಳಿದರೆ ಪರಿಶೀಲನೆ ಮಾಡುತ್ತೇವೆ. ಖಾಸಗಿ ದೇವಸ್ಥಾನಗಳು ಖಾಸಗಿ ಆಗಿಯೇ ಮುಂದೆವರೆಯುತ್ತದೆ ಎಂದು ಸಚಿವ ಕೋಟ ಹೇಳಿದರು.

- Advertisement -

LEAVE A REPLY

Please enter your comment!
Please enter your name here

Most Popular

Recent Comments