- Advertisement -
ಕುಂದಾಪುರ ಜೂನ್ 10: ಯಾರಿಗೂ ಅನುಮಾನ ಬಾರದಂತೆ ಮಹಿಳೆಯರನ್ನು ಕಾರಿನ ಮುಂಭಾಗದಲ್ಲಿ ಕೂರಿಸಿಕೊಂಡು ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನವನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಕುಂದಾಪುರದಿಂದ ಭಟ್ಕಳ ಕಡೆಗೆ ಸಾಗುತ್ತಿದ್ದ ಕಾರಿನಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಬೈಂದೂರು ಹಿಂದೂ ಸಂಘಟನೆಯ ಕಾರ್ಯಕರ್ತರು ಬೈಂದೂರಿನಲ್ಲಿ ಕಾರನ್ನು ತಡೆದು ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Is it sample of flesh trade? Watch out####