Tuesday, June 6, 2023
HomeUncategorizedಡ್ರಗ್ಸ್ ಮಾಫಿಯಾ ಕಿಂಗ್ ಪಿನ್ ಅಂದರ್: ಕರಾವಳಿಯ ಮೂಲದ ಆ ಆಸಾಮಿ ಯಾರು...???

ಡ್ರಗ್ಸ್ ಮಾಫಿಯಾ ಕಿಂಗ್ ಪಿನ್ ಅಂದರ್: ಕರಾವಳಿಯ ಮೂಲದ ಆ ಆಸಾಮಿ ಯಾರು…???

- Advertisement -


Renault

Renault
Renault

- Advertisement -

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಅಕ್ರಮವಾಗಿ ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ದಾಳಿ ನಡೆಸಿದ ಸಿಸಿಬಿ ಪೊಲೀಸರು ಡ್ರಗ್ಸ್ ಮಾಫಿಯಾದ ಕಿಂಗ್ ಪಿನ್ ಮಂಗಳೂರು ಮೂಲದ ಅಸ್ಗರ್ ಆಲಿ ಹಾಗೂ 6 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳಿಂದ ಬರೋಬ್ಬರಿ 35 ಲಕ್ಷ ಮೌಲ್ಯದ 4 ಕೆ.ಜಿ. ಚರಸ್ ಅನ್ನು ವಶಕ್ಕೆ ಪಡೆಯಲಾಗಿದ್ದು, ಸಿಸಿಬಿ ಪೊಲೀಸರು ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ ಡ್ರಗ್ಸ್ ಮಾಫಿಯಾ ಬಯಲಾದ ಬೆನ್ನಲ್ಲೇ ಲಕ್ಷಾಂತರ ಮೌಲ್ಯದ ಡ್ರಗ್ಸ್ ಪತ್ತೆಯಾಗಿರೋದು ಸಿಸಿಬಿ ಪೊಲೀಸರಿಗೆ ತಲೆನೋವು ತರಿಸಿದೆ. ಅಲ್ಲದೇ ಮಾಫಿಯಾದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿರೋ ಸಾಧ್ಯತೆಯ ಹಿನ್ನೆಲೆಯಲ್ಲಿ ತನಿಖೆಯನ್ನು ಚುರುಕುಗೊಳಿಸಿದ್ದಾರೆ.

- Advertisement -

LEAVE A REPLY

Please enter your comment!
Please enter your name here

Most Popular

Recent Comments