Tuesday, September 27, 2022
HomeUncategorizedಮಂಗಳೂರಲ್ಲಿ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ : 38 ಕೆ.ಜಿ. ಗಾಂಜಾ ವಶ

ಮಂಗಳೂರಲ್ಲಿ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ : 38 ಕೆ.ಜಿ. ಗಾಂಜಾ ವಶ

- Advertisement -
Renault

Renault

Renault

Renault


- Advertisement -

ಮಂಗಳೂರು : ಭಾರೀ ಪ್ರಮಾಣದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಎರಡು ತಂಡವನ್ನು ಬಂಧಿಸುವಲ್ಲಿ ಮಂಗಳೂರಿನ ಸಿಸಿಬಿ ಪೊಲೀಸರ ತಂಡ ಯಶಸ್ವಿಯಾಗಿದೆ.

ಮಂಗಳೂರು ಹೊರವಲಯದ ದೇರಳಕಟ್ಟೆಯಿಂದ ಮುಡಿಪು ಕಡೆಗೆ ಗಾಂಜಾ ಸಾಗಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರ ತಂಡ ತೆಲಂಗಾಣ ಮೂಲದ ವಿಠಲ್ ಚೌಹಾನ್ ಹಾಗೂ ಬೀದರ್ ನಿವಾಸಿಗಳಾದ ಸಂಜೀವ ಕುಮಾರ್, ಕಲ್ಲಪ್ಪ ಎಂಬವರನ್ನು ಬಂಧಿಸಿದ್ದಾರೆ. ಗಾಂಜಾ ಸಾಗಾಟಕ್ಕೆ ಬಳಕೆ ಮಾಡುತ್ತಿದ್ದ ಮಹಾರಾಷ್ಟ್ರ ನೋಂದಾಯಿತ ಕಾರು, 15 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯ ಪ್ರಕರಣ ದಾಖಲಾಗಿದೆ.

ಇ ನ್ನು ಕುತ್ತಾರಿನ ದೆಕ್ಕಾಡು ಪ್ರದೇಶದಲ್ಲಿ ಗಾಂಜಾ ಇಟ್ಟುಕೊಂಡು ಆರೋಪಿಗಳು ಮಾರಾಟಕ್ಕೆ ಯತ್ನಿಸುತ್ತಿದ್ದರು. ಖಚಿತ ಮಾಹಿತಿ ಯ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ನರಿಂಗಾನದ ತೌಡುಗೋಳಿ ನಿವಾಸಿ ಅಬ್ದುಲ್ ಅಝೀಜ್ ಅಲಿಯಾಸ್ (40 ವರ್ಷ), ಹಫೀಝ್ (34 ವರ್ಷ) ಸೇರಿದಂತೆ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ.

- Advertisement -


LEAVE A REPLY

Please enter your comment!
Please enter your name here

- Advertisment -

Most Popular

Recent Comments