Tuesday, September 27, 2022
Homeಕರಾವಳಿಮಂಗಳೂರು: ಸ್ವಾತಂತ್ರೋತ್ಸವದ ನೃತ್ಯ ಪ್ರದರ್ಶನಕ್ಕೆ ಅಡ್ಡಿ ; ದೂರು

ಮಂಗಳೂರು: ಸ್ವಾತಂತ್ರೋತ್ಸವದ ನೃತ್ಯ ಪ್ರದರ್ಶನಕ್ಕೆ ಅಡ್ಡಿ ; ದೂರು

- Advertisement -
Renault

Renault

Renault

Renault


- Advertisement -

ಮಂಗಳೂರು: ಆಜಾದಿ ಅಮೃತ ಮಹೋತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ವಿದ್ಯಾರ್ಥಿಗಳ ನೃತ್ಯ ಪ್ರದರ್ಶನದಲ್ಲಿ ವೀರಸಾವರ್ಕರ್ ಭಾವಚಿತ್ರ ಪ್ರದರ್ಶನ ಮಾಡಿದರೆಂಬ ಕಾರಣಕ್ಕೆ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿ ಶಿಕ್ಷಕಿಯಿಂದ ಕ್ಷಮಾಪಣೆ ಕೇಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಜ್ಪೆ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಆರೋಪಿಗಳನ್ನು ರಿಯಾಜ್ , ಮನ್ಸೂರ್ ,ಅಶ್ರಫ್ ,ಶಾಹಿಖ್ ಮತ್ತು ಇತರರು ಎಂದು ಗುರುತಿಸಲಾಗಿದೆ ಗುರುಪುರ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಪಂಚಾಯತ್ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಿದ್ದು ಈ ಕಾರ್ಯಕ್ರಮದಲ್ಲಿ ಕೈಕಂಬದ ಬೆಥನಿ ಶಾಲೆ ವಿದ್ಯಾರ್ಥಿನಿಯರು ನೃತ್ಯ ಪ್ರದರ್ಶನ ನೀಡಿದರು ಈ ಸಂದರ್ಭ ಸ್ವಾತಂತ್ರ್ಯ ಹೋರಾಟಗಾರರ ಜೊತೆ ವೀರ ಸಾವರ್ಕರರ ಭಾವಚಿತ್ರವನ್ನು ವೇದಿಕೆಯಲ್ಲಿ ಪ್ರದರ್ಶನ ಮಾಡಿದ್ದರು .

ಈ ವೇಳೆ ಅಲ್ಲಿ ಪ್ರೇಕ್ಷಕರಾಗಿ ಏಕೆ ರಿಯಾಜ್ ,ಮನ್ಸೂರ್ ,ಆಶ್ರಫ್ ,ಶಾಹಿಕ್ ಮತ್ತಿತರರು ಸಾರ್ವಕರ್ ಭಾವಚಿತ್ರವನ್ನು ವೇದಿಕೆಯಲ್ಲಿ ಪ್ರದರ್ಶನ ಮಾಡಿದ್ದಕ್ಕೆ ಆಕ್ಷೇಪಣೆ ವ್ಯಕ್ತಪಡಿಸಿ ಬೆಥನಿ ಶಾಲಾ ಮುಖ್ಯೋಪಾಧ್ಯಾಯ ರೊಂದಿಗೆ ಮಾತಿನ ಚಕಮಕಿ ನಡೆಸಿ ಸರಕಾರಿ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸಿದ್ದಾರೆ ಎಂದು ದೂರು ನೀಡಲಾಗಿದೆ .ಈ ಬಗೆಯ ಗುರುಪುರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಬೂಬಕರ್ ಅವರು ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

- Advertisement -


LEAVE A REPLY

Please enter your comment!
Please enter your name here

- Advertisment -

Most Popular

Recent Comments