Friday, October 7, 2022
Homeಕರಾವಳಿಮಂಗಳೂರು: ಪಾಲಿಕೆ ನೂತನ ಮೇಯರ್ ಆಗಿ ಜಯಾನಂದ ಅಂಚನ್,ಉಪ ಮೇಯರ್ ಪೂರ್ಣಿಮಾ ಆಯ್ಕೆ

ಮಂಗಳೂರು: ಪಾಲಿಕೆ ನೂತನ ಮೇಯರ್ ಆಗಿ ಜಯಾನಂದ ಅಂಚನ್,ಉಪ ಮೇಯರ್ ಪೂರ್ಣಿಮಾ ಆಯ್ಕೆ

- Advertisement -
Renault

Renault

Renault

- Advertisement -

ಮಂಗಳೂರು: ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್ ಆಗಿ ಕದ್ರಿ ಪದವು ವಾರ್ಡ್ ನ ಬಿಜೆಪಿಯ ಹಿರಿಯ ಕಾರ್ಪೊರೇಟರ್ ಜಯಾನಂದ ಅಂಚನ್ ಆಯ್ಕೆಯಾಗಿದ್ದಾರೆ. ಉಪ ಮೇಯರ್ ಆಗಿ ಬಿಜೆಪಿಯ ಕಾರ್ಪೊರೇಟರ್ ಪೂರ್ಣಿಮಾ ಆಯ್ಕೆಯಾದರು.

ಸೆ.9ರ ಮಧ್ಯಾಹ್ನ ನಡೆದ ಚುನಾವಣೆಯಲ್ಲಿ ಇಬ್ಬರು ಶಾಸಕರು ಸೇರಿದಂತೆ ಉಪಸ್ಥಿತರಿದ್ದ ಒಟ್ಟು ಮತದಾರರಲ್ಲಿ 46 ಮಂದಿ ಜಯಾನಂದ ಪರ ಮತ ಚಲಾಯಿಸಿದರು.

ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಹಿರಿಯ ಕಾರ್ಪೊರೇಟರ್ ಶಶಿಧರ ಹೆಗ್ಡೆ 14 ಮತ ಗಳಿಸಿದರು.

ಉಪ ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಪೂರ್ಣಿಮಾ 46 ಮತಗಳನ್ನು ಗಳಿಸಿ ಚುನಾಯಿತರಾದರು. ಅವರ ವಿರುದ್ಧ ಕಾಂಗ್ರೆಸ್ ನಿಂದ ಕಣಕ್ಕಿಳಿದಿದ್ದ ಝೀನತ್ ಶಂಸುದ್ದೀನ್ 14 ಮತಗಳನ್ನು ಗಳಿಸಿದರು.

ಎಸ್ ಡಿಪಿಐ ಪಕ್ಷದ ಇಬ್ಬರು ಸದಸ್ಯರು ಚುನಾವಣಾ ಪ್ರಕ್ರಿಯೆಯಲ್ಲಿ ತಟಸ್ಥವಾಗಿದ್ದರು. ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಜಿ.ಸಿ . ಪ್ರಕಾಶ್ ನೇತೃತ್ವದಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಿತು.

- Advertisement -


LEAVE A REPLY

Please enter your comment!
Please enter your name here

Most Popular

Recent Comments