ಮಂಗಳೂರಿನಲ್ಲಿ ಅಟಲ್ ಜಿ ಸ್ಮರಣೆ ಮತ್ತು ಕಿಸಾನ್ ಸಮ್ಮಾನ್ ದಿನಾಚರಣೆ
ಮಂಗಳೂರು : ಕೃಷಿ ಮಾರುಕಟ್ಟೆಯಲ್ಲಿ ದಲ್ಲಾಳಿಗಳನ್ನು ತಪ್ಪಿಸಿ ನೇರ ಮಾರುಕಟ್ಟೆ ವ್ಯವಸ್ಥೆ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಶ್ರೇಷ್ಠ ಕಾರ್ಯ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಮಂಗಳೂರಿನಲ್ಲಿ ನಡೆದ ಅಟಲ್ ಜಿ ಸ್ಮರಣೆ ಮತ್ತು ಕಿಸಾನ್ ಸಮ್ಮಾನ್ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಕಣ್ಣೀರನ್ನು ಒರೆಸುವ ಕೆಲಸ ಮಾಡಿದ್ದಾರೆ. 9 ಕೋಟಿ ರೈತರ ಖಾತೆಗೆ ತಲಾ 6 ಸಾವಿರ ರೂ. ಇಂದು ಜಮೆ ಆಗಲಿದೆ. ಇದಕ್ಕೆಲ್ಲ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪ್ರೇರಣೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ವೇದವ್ಯಾಸ ಕಾಮತ್, ಉಮನಾಥ್ ಕೋಟ್ಯಾನ್, ರಾಜೇಶ್ ನಾಯಕ್, ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಉಪಸ್ಥಿತರಿದ್ದರು. ಇದೇ ವೇಳೆ ಪ್ರಧಾನಿ ಮೋದಿ ರೈತರೊಂದಿಗೆ ನಡೆಸಿದ ಸಂವಾದದ ನೇರಪ್ರಸಾರ ವೀಕ್ಷಿಸುವ ವ್ಯವಸ್ಥೆ ಮಾಡಲಾಗಿತ್ತು.