ಮಂಗಳೂರು : “ನೀವು ನಿಮ್ಮ ಬಗ್ಗೆ ಉನ್ನತ ಭಾವನೆ ಹೊಂದಿದ್ದಾಗ ಇತರರ ಮೇಲೆ ಉತ್ತಮ ಪ್ರಭಾವ ಬೀರುತ್ತೀರಿ ಮತ್ತು ಇತರರೊಂದಿಗೆ ಉತ್ತಮ ಬಾಂಧವ್ಯ ಸಾಧಿಸುತ್ತೀರಿ. ಆದರೆ ಇವೆಲ್ಲ ಸಾಧ್ಯವಾಗುವುದು ಅಹಂ ಭಾವನೆಯನ್ನು ತೊರೆದಾಗ ಮಾತ್ರ” ಎಂದು ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಪ್ರೀತಿ ಕೀರ್ತಿ ಡಿ’ಸೋಜಾ ಹೇಳಿದರು.
ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜಕಾರ್ಯ ವಿಭಾಗ ಆಯೋಜಿಸಿದ “ವ್ಯಕ್ತಿತ್ವ ವಿಕಸನ” ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, “ನಿಮ್ಮನ್ನು ಹೇಗೆ ನೋಡುತ್ತಾರೆ ಎಂಬುದು ಮುಖ್ಯವಲ್ಲ, ನೀವು ನಿಮ್ಮನ್ನು ಹೇಗೆ ನೋಡುತ್ತೀರಿ ಎಂಬುದು ಮುಖ್ಯ” ಎಂದು ಆಂತರಿಕ ಪ್ರೇರಣೆ ನೀಡಿದರು.:
ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥರಾದ ಪ್ರೊ. ಪೌಲ್. ಜಿ ಅಕ್ವಿನಸ್ ರವರು ವ್ಯಕ್ತಿತ್ವ ವಿಕಸನ ಕಾರ್ಯಗಾರದ ಮಹತ್ವವನ್ನು ಹೇಳಿದರು. ಈ ವೇಳೆ ಸಮಾಜಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಯಶಸ್ವಿನಿ ಬಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪ್ರಜ್ಞಾ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ಕವನ ಸ್ವಾಗತಿಸಿ, ಆಶಾ ವಂದಿಸಿದರು. ವೈಶಾಲಿ ಕಾರ್ಯಕ್ರಮ ನಿರೂಪಿಸಿದರು.
The programme was very good, Resource person was interacted with all students and conducted some activities and she gave information to improvements ourselves was very important, and encouraged.
it’s very useful information