ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸುತ್ತಿರುವ ಪಾಕ್‌ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.
ಅಗತ್ಯವಿದ್ದಲ್ಲಿ ಗಡಿಯುದ್ದಕ್ಕೂ ಭಯೋತ್ಪಾದಕ ಗುರಿಗಳನ್ನು ಹೊಡೆಯುವ ಸಾಮರ್ಥ್ಯ ಭಾರತಕ್ಕಿದೆ ಎಂದಿದ್ದಾರೆ. ಪಾಕಿಸ್ತಾನ ಕೆಲವು ತಿಂಗಳಿನಿಂದ ಹಲವು ಬಾರಿ ಕದನ ವಿರಾಮ ಉಲ್ಲಂಘಿಸಿದೆ. ಇದಕ್ಕೆ ಭಾರತೀಯ ಸೇನೆ ಸೂಕ್ತ ಉತ್ತರ ನೀಡುತ್ತಿದೆ. ಅಗತ್ಯ ಬಿದ್ದರೆ ಇನ್ನೊಂದು ಬದಿಗೆ ಹೋಗಿ ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ಮಾಡಬಹುದು ಎಂದಿದ್ದಾರೆ