Saturday, June 3, 2023
Homeರಾಜಕೀಯದೇಶವಿರೋಧಿ ಕೃತ್ಯ ನಡೆಸುತ್ತಿರುವ ಎಸ್‌ಡಿಪಿಐ ವಿರುದ್ಧ ಕಠಿಣ ಕ್ರಮ ಖಚಿತ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್

ದೇಶವಿರೋಧಿ ಕೃತ್ಯ ನಡೆಸುತ್ತಿರುವ ಎಸ್‌ಡಿಪಿಐ ವಿರುದ್ಧ ಕಠಿಣ ಕ್ರಮ ಖಚಿತ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್

- Advertisement -


Renault

Renault
Renault

- Advertisement -

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆದ್ದ ಎಸ್‌ಡಿಪಿಐ ಬೆಂಬಲಿತರು, ಕಾರ್ಯಕರ್ತರು ಭಾರತ್ ಮಾತಾ ಕೀ ಜೈ ಎಂದು ಹೇಳಬೇಕಿತ್ತು. ಆದರೆ, ಗೆಲುವಿನ ಉನ್ಮಾದದಲ್ಲಿ ಶತ್ರುರಾಷ್ಟ್ರಕ್ಕೆ ಜೈಕಾರ ಹಾಕಿದ್ದಾರೆ. ಭಯೋತ್ಪಾದನೆಗೆ ಪೂರಕವಾಗಿ ವರ್ತಿಸುತ್ತಿರುವ ಎಸ್‌ಡಿಪಿಐ ವಿರುದ್ಧ ಕಠಿಣ ಕ್ರಮ ಖಚಿತ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು.
ರಾಜಕೀಯ ಪಕ್ಷವಾಗಿ ಗುರುತಿಸಿಕೊಂಡಿರುವ ಎಸ್‌ಡಿಪಿಐ ಭಯೋತ್ಪಾದನೆ, ರಾಷ್ಟ್ರವಿರೋಧಿ ಚಟುವಟಿಕೆ ನಡೆಸುತ್ತಿದೆ. ಪಿಎಫ್‌ಐನ ಶಾಖೆಯಾಗಿರುವ ಈ ರಾಜಕೀಯ ಪಕ್ಷ ರಾಷ್ಟ್ರ ವಿರೋಧಿಯಾಗಿ ವರ್ತಿಸುತ್ತಿರುವುದು ಇದೇ ಮೊದಲಲ್ಲ. ದೇಶವಿರೋಧಿ ಕೃತ್ಯ ನಡೆಸುವವರ ಬಗ್ಗೆ ಯಾವುದೇ ದಾಕ್ಷಿಣ್ಯ ಇಲ್ಲ. ಶತ್ರುರಾಷ್ಟ್ರ ಪರ ಘೋಷಣೆ ಕೂಗಿರುವ ಎಸ್‌ಡಿಪಿಐ ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಹೇಳಲಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.
ಎಸ್‌ಡಿಪಿಐ ರಾಜಕೀಯ ಪಕ್ಷವಾಗಿ ದೇಶವಿರೋಧಿ ಕೃತ್ಯ ನಡೆಸುತ್ತಿರುವ ಬಗ್ಗೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕಿದೆ. ಎಸ್‌ಡಿಪಿಐ ನಿಷೇಧ ಬಗ್ಗೆಯೂ ಕಾನೂನು ರೀತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕಿದೆ. ಎಲ್ಲೋ ಯಾರನ್ನೋ ಬಂಧಿಸಿದ್ದಾರೆ ಎಂಬ ಕಾರಣಕ್ಕೆ ಸಂಸದರ ಕಚೇರಿ ಮುತ್ತಿಗೆ ಹಾಕಿ ಗಲಭೆ ಸೃಷ್ಟಿಸಲು ಯತ್ನಿಸಿರುವ ಆ ಪಕ್ಷದ ಧೋರಣೆ ಖಂಡನೀಯ ಎಂದರು.
ಡಿಜೆ ಹಳ್ಳಿ ಘಟನೆಯಲ್ಲಿ ಎಸ್‌ಡಿಪಿಐ ಪಾತ್ರವಿದೆ. ಈ ವಿಚಾರದಲ್ಲಿ ಎಸ್‌ಡಿಪಿಐಗೂ ನಮಗೂ ಸಂಬಂಧವಿಲ್ಲ ಎಂದು ಕಾಂಗ್ರೆಸ್ ಹೇಳುತ್ತಿದೆ. ಆದರೆ, ಬಂಟ್ವಾಳ ಪುರಸಭೆ ಸಹಿತ ಹಲವೆಡೆ ಎಸ್‌ಡಿಪಿಐ ಜತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದೆ. ಮಂಗಳೂರು ಶಾಸಕರು ಸಂಜೆಯಾಗುತ್ತಲೇ ಎಸ್‌ಡಿಪಿಐ ಮುಖಂಡರ ಜತೆ ಸಭೆ ನಡೆಸುತ್ತಾರೆ. ದೇಶವಿರೋಧಿ ಕೃತ್ಯ ನಡೆಸುತ್ತಿರುವ ಎಸ್‌ಡಿಪಿಐ ಬಗ್ಗೆ ಕಾಂಗ್ರೆಸ್ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದು ನಳಿನ್ ಹೇಳಿದರು

- Advertisement -

LEAVE A REPLY

Please enter your comment!
Please enter your name here

Most Popular

Recent Comments