- Advertisement -
ಮಂಗಳೂರು; ನಗರದ ನೂತನ ಪೊಲೀಸ್ ಕಮೀಷನರ್ ಆಗಿ ಬೆಂಗಳೂರಿನ ಶಶಿಕುಮಾರ್ IPS ಅವರನ್ನು ರಾಜ್ಯ ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಹಿಂದೆ ಬೆಂಗಳೂರು ಡಿಸಿಪಿ, ಹಾಗೂ ಎಸ್ಪಿ ಆಗಿ ಕರ್ತವ್ಯ ನಿರ್ವಹಿಸಿದ್ದರು. ಜನ ಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಹಾಗೂ ತನ್ನ ಉತ್ತಮ ಕರ್ತವ್ಯ ನಿರ್ವಹಣೆಯ ಬಗ್ಗೆ ಜನ ಮೆಚ್ಚುಗೆ ಪಡೆದಿದ್ದರು. ಮಂಗಳೂರು ನಗರದ ಪೊಲೀಸ್ ಕಮೀಷನರ್ ಆಗಿದ್ದ ವಿಕಾಸ್ ಕುಮಾರ್ ಅವರು ಪದೋನ್ನತಿ ಹೊಂದಿ ಇಂದು ಮಂಗಳೂರಿನಿಂದ ವರ್ಗಾವಣೆಗೊಂಡಿದ್ದಾರೆ