ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಮಾಜಿ ಸಚಿವ ಜಿ.ಟಿ.ದೇವೇಗೌಡರು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.
ಮೈಸೂರು ತಾಲ್ಲೂಕಿನ ಗುಂಗ್ರಾಲ್ ಛತ್ರದ ಗ್ರಾಮದಲ್ಲಿ ಶಾಸಕ ಜಿ.ಟಿ.ದೇವೇಗೌಡರು ತಮ್ಮ ಪತ್ನಿ ಲಲಿತಾ ಅವರೊಂದಿಗೆ ಮತಗಟ್ಟೆಗೆ ಆಗಮಿಸಿ, ಮತದಾರರೊಂದಿಗೆ ಸರದಿ ಸಾಲಿನಲ್ಲಿ ನಿಂತು, ಎಲ್ಲರಂತೆ ಮತ ಚಲಾಯಿಸಿದರು.