
- Advertisement -
ಇತ್ತೀಚೆಗಷ್ಟೇ ಕೊರೋನಾ ಸೋಂಕಿಗೆ ತುತ್ತಾಗಿದ್ದ ಉತ್ತರಾಖಂಡ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.
ಡಿ.18 ರಂದು ಕೊರೋನಾ ಸೋಂಕು ದೃಢಪಟ್ಟಿತ್ತು. ಆಸ್ಪತ್ರೆಗೆ ದಾಖಲಾಗದೆ, ಮನೆಯಲ್ಲಿಯೇ ಐಸೋಲೇಶನ್‌ಗೆ ಒಳಪಟ್ಟಿದ್ದರು. ಆದರೆ ಭಾನುವಾರ ಅವರನ್ನು ಆಸ್ಪತ್ರೆಗೆ ದಾಖಲಿಸಿರುವ ಮಾಹಿತಿ ತಿಳಿದಿದೆ. ಮೂಲಗಳ ಪ್ರಕಾರ ತ್ರಿವೇಂದ್ರ ಸಿಂಗ್ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ.