ಆರ್ಥಿಕವಾಗಿ ತೀರಾ ಹಿಂದುಳಿದಿರುವ ಮುಸ್ಲಿಮ್ ಸಮುದಾಯದ ಹೆಣ್ಣು ಮಕ್ಕಳ ಮದುವೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ಎಪ್ರಿಲ್ 7ರಂದು ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ನೇರಳಕಟ್ಟೆಯಲ್ಲಿರುವ ಜನಪ್ರಿಯ ಗಾರ್ಡನ್ ಸಭಾಂಗಣದಲ್ಲಿ ‘ಸಾಮೂಹಿಕ ವಿವಾಹ’ ಸಮಾರಂಭ ಹಮ್ಮಿಕೊಂಡಿದ್ದು, ಆಸಕ್ತ ವಧುವಿನ ಕುಟುಂಬಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವಾಸವಾಗಿರುವ ವಧುವಿನ ಕುಟುಂಬಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಆಯ್ದ ವಧುವಿಗೆ ಮದುವೆಯ ವಸ್ತ್ರ, 4 ಪವನ್ ಚಿನ್ನಾಭರಣ ಹಾಗೂ ಮದುವೆಯ ಖರ್ಚನ್ನು ಟ್ರಸ್ಟ್ ಭರಿಸಲಿದೆ. ಅನಾಥ, ಅಂಗವಿಕಲ, ಆರ್ಥಿಕ ಸಂಕಷ್ಟ ಹಾಗೂ ಮದುವೆಯ ವಯಸ್ಸು ಮೀರಿರುವ ವಧುವಿಗೆ ಆಧ್ಯತೆ ನೀಡಲಾಗುವುದು.
ಅರ್ಜಿ ಸಲ್ಲಿಸಲು ಫೆಬ್ರವರಿ 28 ಕೊನೆಯ ದಿನಾಂಕವಾಗಿದ್ದು, ಆಸಕ್ತರು ನಿಗದಿತ ಅರ್ಜಿ ನಮೂನೆ ಪಡೆಯಲು ಅಲ್ ವಫಾ ಚಾರಿಟೆಬಲ್ ಟ್ರಸ್ಟ್, ಸಿ 24, 2ನೇ ಮಹಡಿ, ಅಲ್ ರಹಬಾ ಪ್ಲಾಝಾ, ಸ್ಟೇಟ್ ಬ್ಯಾಂಕ್ ಬಳಿ, ನೆಲ್ಲಿಕಾಯಿ ರಸ್ತೆ, ಮಂಗಳೂರು – 575001 ದೂರವಾಣಿ ಸಂ. 9845054191ನ್ನು ಸಂಪರ್ಕಿಸಬಹುದು ಎಂದು ಅಲ್ ವಫಾ ಚಾರಿಟೆಬಲ್ ಟ್ರಸ್ಟ್‍ನ ಪ್ರಧಾನ ಕಾರ್ಯದರ್ಶಿ ಉಮರ್ ಯು. ಹೆಚ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
—