ಮಂಗಳೂರು: ಹಾಗೂ ಇಲಾಖೆಯ ಆಶಯದಂತೆ ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ವಿಶೇಷ ಒತ್ತು ನೀಡಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದ್ದಾರೆ.
ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮತ್ತು ಎ.ಜೆ.ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ವತಿಯಿಂದ ಪತ್ರಿಕಾ ಭವನದಲ್ಲಿ ಆರಂಭಿಸಲಾಗಿರುವ ಮೀಡಿಯಾ ಹೆಲ್ತ್ ಕ್ಲಿನಿಕ್‌ಗೆ ಮಂಗಳವಾರ ಚಾಲನೆ ನೀಡಿದ ಬಳಿಕ ಅವರು ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ನಗರದಲ್ಲಿ ಮಾದಕ ದ್ರವ್ಯಗಳ ಸಮಸ್ಯೆ ಹೆಚ್ಚಿದೆ. ಇದರಿಂದ ಯುವ ಸಮೂಹ ದಿಕ್ಕು ತಪ್ಪುವ ಸಾಧ್ಯೆ ಇರುವುದರಿಂದ ಅದನ್ನು ಬೇರು ಸಹಿತ ಕಿತ್ತು ಹಾಕುವ ಪ್ರಯತ್ನ ಮಾಡಲಾಗುವುದು. ಕಾನೂನು ಪಾಲಕರಿಗೆ ರಕ್ಷಣೆ ನೀಡುವ ಜೊತೆಗೆ ಸಮಾಜ ವಿರೋಧಿಗಳು, ಕಾನೂನು ಮೀರಿ ವರ್ತಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಈಗಾಗಲೇ ನಡೆದ ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇಂತಹ ಪ್ರಕರಣಗಳು ಮರುಕಳಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದವರು ಹೇಳಿದರು.

LEAVE A REPLY

Please enter your comment!
Please enter your name here