ಬೆಂಗಳೂರು: ರಾಜ್ಯ ಸಚಿವ ಸಂಪುಟದ ನೂತನ ಸಚಿವರುಗಳಾಗಿ ಏಳು ಮಂದಿ ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ವಜುಭಾಯಿ ವಾಲಾ ಅವರು ನೂತನ ಸಚಿವರುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹುಕ್ಕೇರಿ ಶಾಸಕ ಉಮೇಶ್ ಕತ್ತಿ ಅವರು ಮೊದಲನೆಯವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಅವರು ಮೂರನೇ ಬಾರಿಗೆ ಮಂತ್ರಿ ಪದವಿಗೇರಿದರು.
ಮಹದೇವಪುರ ಶಾಸಕ ಅರವಿಂದ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅರವಿಂದ ಲಿಂಬಾವಳಿ ಅವರು ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಅವರು ಮೂರನೆಯವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರೂ ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.