ಬೆಂಗಳೂರು : ಸಂಕ್ರಾಂತಿ ಹಬ್ಬಕ್ಕೆ ರಾಜ್ಯ ಸರ್ಕಾರವು ನಗರ ಹಾಗೂ ಪಟ್ಟಣವಾಸಿಗಳಿಗೆ ಬಿಗ್ ಶಾಕ್ ನೀಡಿದ್ದು, ಬಿಬಿಎಂಪಿ ಹೊರತುಪಡಿಸಿ ರಾಜ್ಯದ 10 ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಲ್ಲಿ ಆಸ್ತಿ ತೆರಿಗೆ ಹೆಚ್ಚಳ ಮಾಡುವ ನಿರ್ಧಾರ ಕೈಗೊಂಡಿದೆ.ಈ ಕುರಿತು ಮಾಹಿತಿ ನೀಡಿರುವ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, ಆಸ್ತಿ ಪರಿಷ್ಕರಣೆ ಸಂಬಂಧ ಕರ್ನಾಟಕ ಮುನ್ಸಿಪಲ್ ಕಾಯ್ದೆಗೆ ತಿದ್ದುಪಡಿ ಮಾಡಲು ತೀರ್ಮಾನಿಸಿರುವುದಾಗಿ ತಿಳಿಸಿದ್ದಾರೆ.ರಾಜ್ಯ ಸರ್ಕಾರ ಸಾಲ ಮಾಡುವುದಕ್ಕೆ ಜಿಎಸ್ ಡಿಪಿಯ ಶೇ. 5 ರಷ್ಟು ಹೆಚ್ಚಿಸಿಕೊಳ್ಳುವ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳ ಆದಾಯ ವೃದ್ಧಿಸಿಕೊಳ್ಳಬೇಕೆಂಬ ಷರತ್ತನ್ನು ಕೇಂದ್ರ ಸರ್ಕಾರ ವಿಧಿಸಿತ್ತು.
ಅದಕ್ಕೆ ಅನುಗುಣವಾಗಿ ತೆರಿಗೆ ಹೆಚ್ಚಳಕ್ಕೆಅವಕಾಶ ಮಾಡಿಕೊಡಲಾಗಿದೆ