ಹೊಸವರ್ಷಾಚರಣೆ ಮಾಡದಂತೆ ನಿರ್ಬಂಧ ಹೇರಲಾಗಿದ್ದ ಬೆಂಗಳೂರಿನ ಎಂಜಿ ರಸ್ತೆಯಲ್ಲಿ ಕನ್ನಡ ಚಳವಳಿ ಪಕ್ಷದ ನಾಯಕ ವಾಟಾಳ್ ನಾಗರಾಜ್ ಹೊಸವರ್ಷ ಮುಂದಾಗಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರೂಪಾಂತರಿ ಕೊರೋನಾ ಸಿಲಿಕಾನ್’ಸಿಟಿಗೂ ಕಾಲಿಟ್ಟಿರುವ ಹಿನ್ನೆಲೆಯಲ್ಲಿ ಹೊಸವರ್ಷಾಚರಣೆಗೆ ನಗರ ಪೊಲೀಸರು ನಿರ್ಬಂಧ ಹೇರಿದ್ದರು.
ಆದರೆ ವಾಟಾಳ್ ನಾಗರಾಜ್ ಅವರು ಎಂಜಿ ರಸ್ತೆಯಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಹೊಸವರ್ಷಾಚರಣೆಗೆ ಮುಂದಾಗಿದ್ದರು. ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.