Monday, October 2, 2023
Homeರಾಜಕೀಯಜನವರಿ 18 ರಂದು ಜೆಡಿಎಸ್ ನ ಪ್ರಮುಖರ ನೂತನ ಸಮಿತಿ ಪ್ರಕಟ!

ಜನವರಿ 18 ರಂದು ಜೆಡಿಎಸ್ ನ ಪ್ರಮುಖರ ನೂತನ ಸಮಿತಿ ಪ್ರಕಟ!

- Advertisement -



Renault

Renault
Renault

- Advertisement -

ಜನವರಿ 18ರಂದು ಹೊಸದಾಗಿ ಕೋರ್ ಕಮಿಟಿ ರಚಿಸಲು ಪಕ್ಷದ ಪ್ರಮುಖರ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಸೂರ್ಯ ಪಥ ಬದಲಿಸಿ ಹೊಸ ಭರವಸೆಯ ಹೊಂಗಿರಣ ಮೂಡಿಸಿದಂತೆ ಜೆಡಿಎಸ್ ಪಕ್ಷದ ಸಂಘಟನೆಯ ದೃಷ್ಟಿಯಿಂದ ಹೊಸತನದೊಂದಿಗೆ ಪಕ್ಷದ ಚಟುವಟಿಕೆಗಳನ್ನು ಕ್ರಿಯಾಶೀಲಗೊಳಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಇದರ ಮೊದಲ ಹೆಜ್ಜೆಯಾಗಿ ಈ ತಿಂಗಳ 18ರಂದು ಹೊಸದಾಗಿ ಕೋರ್ ಕಮಿಟಿ ರಚಿಸಲು ಪಕ್ಷದ ಪ್ರಮುಖರ ಸಭೆಯನ್ನು ಕರೆಯಲಾಗಿದೆ. ಅಂದಿನ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿ ಹೊಸ ಕೋರ್ ಕಮಿಟಿಯನ್ನು ಅಸ್ತಿತ್ವಕ್ಕೆ ತರಲಾಗುವುದು ಎಂದಿದ್ದಾರೆ.

ನಂತರ ಪಕ್ಷದ ರಾಜ್ಯ ಘಟಕದ ಪದಾಧಿಕಾರಿಗಳ ನೇಮಕ, ಕಂದಾಯ ವಿಭಾಗವಾರು, ಜಿಲ್ಲೆ, ತಾಲೂಕು ಹಾಗೂ ಬೂತ್ ಮಟ್ಟದಲ್ಲಿ ಪಕ್ಷ ಬಲವರ್ಧನೆಗಾಗಿ ಪದಾಧಿಕಾರಿಗಳ ನೇಮಕಕ್ಕೆ ಚಾಲನೆ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

- Advertisement -

LEAVE A REPLY

Please enter your comment!
Please enter your name here

Most Popular

Recent Comments