Saturday, September 30, 2023
Homeರಾಜಕೀಯಪ್ಲಾಸ್ಟಿಕ್ ಮುಕ್ತವಾಗಿರಲಿದೆ ರಾಜ್ಯ ಬಿಜೆಪಿ ಸಭೆ : ಸಚಿವ ಕೆ.ಎಸ್.ಈಶ್ವರಪ್ಪ

ಪ್ಲಾಸ್ಟಿಕ್ ಮುಕ್ತವಾಗಿರಲಿದೆ ರಾಜ್ಯ ಬಿಜೆಪಿ ಸಭೆ : ಸಚಿವ ಕೆ.ಎಸ್.ಈಶ್ವರಪ್ಪ

- Advertisement -Renault

Renault
Renault

- Advertisement -

ನಗರದ ಪೆಸಿಟ್ ಕಾಲೇಜು ಸಭಾಂಗಣದಲ್ಲಿ ಜನವರಿ 2 ಮತ್ತು 3 ರಂದು ನಡೆಯುವ ರಾಜ್ಯ ಬಿಜೆಪಿ ಸಭೆ ಪ್ಲಾಸ್ಟಿಕ್ ಮುಕ್ತ ಹಾಗೂ ಪರಿಸರ ಸ್ನೇಹಿ ಆಗಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಪೆಸಿಟ್ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ಸಭೆಯ ಪೂರ್ವ ತಯಾರಿ ಅವಲೋಕಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಕರ್ನಾಟಕ ಬಿಜೆಪಿ ಕಾರ್ಯಕರ್ತರಿಗೆ ಈಗ ಸಂಭ್ರಮದ ದಿನವಾಗಿದೆ. ಗ್ರಾಮೀಣ ಜನರು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳನ್ನು ಪಕ್ಕಕ್ಕೆ ಸರಿಸಿ ಬಿಜೆಪಿಗೆ ಹೆಚ್ಚು ಆಶೀರ್ವಾದ ಮಾಡಿದ್ದಾರೆ. ಇಂತಹ ಸಂಭ್ರಮದ ಸಂದರ್ಭದಲ್ಲಿ ಸರಳವಾಗಿ ವಿಶೇಷ ಸಭೆ ನಡೆಯುತ್ತಿದೆ ಎಂದು ತಿಳಿಸಿದರು.
ಸಭೆಯಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಡಿ.ಕೆ.ಅರುಣ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕೇಂದ್ರ ಸಚಿವರುಗಳಾದ ಪ್ರಹ್ಲಾದ ಜೋಷಿ, ಸದಾನಂದ ಗೌಡ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ರಾಜ್ಯದ ಸಚಿವರುಗಳು ಹಾಗೂ ವಿವಿಧ ಜವಾಬ್ದಾರಿ ಸ್ಥಾನದಲ್ಲಿರುವವರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಸಂಸದ ಬಿ.ವೈ.ರಾಘವೇಂದ್ರ, ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಜಿಲ್ಲಾಧ್ಯಕ್ಷ ಮೇಘರಾಜ್,
ಪ್ರಮುಖರಾದ ಭಾನುಪ್ರಕಾಶ್, ಗಿರೀಶ್ ಪಟೇಲ್, ಮಹೇಶ್ ತೆಂಗಿನಕಾಯಿ, ತುಳಸಿ ಮುನಿರಾಜುಗೌಡ ಸುದ್ದಿಗೋಷ್ಟಿಯಲ್ಲಿದ್ದರು.

- Advertisement -

LEAVE A REPLY

Please enter your comment!
Please enter your name here

Most Popular

Recent Comments