ಬೆಳಗಾವಿ : ಪಂಜಮಸಾಲಿ ಲಿಂಗಾಯತ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಕುರಿತಂತೆ ಕೂಡಲಸಂಗಮದ ಪಂಜಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿಯೊಂದಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಚರ್ಚಿಸಲು ಸಿದ್ಧರಿದ್ದಾರೆ ಎಂದು ಸಚಿವ ಮುರುಗೇಶ್ ನಿರಾಣಿ ಸ್ಪಷ್ಟಪಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮುರುಗೇಶ್ ನಿರಾಣಿ, ಪಂಚಮಸಾಲಿ ಲಿಂಗಾಯತ ಸಮುದಾಯ 2 ಎ ಮೀಸಲಾತಿಗಾಗಿ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದೆ. ವೀರಶೈವ ಲಿಂಗಾಯತ ಮತ್ತು ಇತರೆ ಸಮಾಜಕ್ಕೆ ಅವಕಾಶ ಸಿಗಬೇಕು. ಹೀಗಾಗಿ ಸಿಎಂ ಯಡಿಯೂರಪ್ಪ ತಮ್ಮ ಇತಿಮಿತಿಯೊಳಗೆ ಬೇಡಿಕೆ ಈಡೇರಿಸಲು ಸಿದ್ಧರಿದ್ದಾರೆ ಎಂದು ನಿರಾಣಿ ಭರವಸೆ ನೀಡಿದ್ದಾರೆ

LEAVE A REPLY

Please enter your comment!
Please enter your name here