ನವದೆಹಲಿ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಕೊರೊನಾ ಲಸಿಕೆಯನ್ನು ಪಡೆದುಕೊಂಡಿದ್ದ ಇಬ್ಬರು ವ್ಯಕ್ತಿಗಳು ಮೃತಪಟ್ಟಿರುವ ಘಟನೆ ಕರ್ನಾಟಕದ ಸಂಡೂರು ಮತ್ತು ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ಹೇಳಲಾಗುತ್ತಿದೆ.

ಸಂಡೂರಿನ ಸಾರ್ವಜನಿಕ ಸರಕಾರಿ ಆಸ್ಪತ್ರೆಯ ಡಿ ಗ್ರೂಪ್ ನೌಕರನಾಗಿರುವ ನಾಗರಾಜ್ ಬಾಳಪ್ಪ ( 43 ವರ್ಷ) ಅವರು ಶನಿವಾರವಷ್ಟೇ ಕೋವಿಶೀಲ್ಡ್ ಲಸಿಕೆಯನ್ನು ಪಡೆದುಕೊಂಡಿದ್ದರು. ಲಸಿಕೆ ಪಡೆದ ನಂತರದಲ್ಲಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಇನ್ನು ಉತ್ತರ ಪ್ರದೇಶದಲ್ಲಿ ಕೊರೊನಾ ಲಸಿಕೆ ಪಡೆದುಕೊಂಡಿದ್ದ 52 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಆದರೆ ವ್ಯಕ್ತಿಯ ಸಾವಿಗೆ ಕೊರೊನಾ ಲಸಿಕೆ ಕಾರಣವಲ್ಲ ಎಂದು ಸಚಿವಾಲಯ ತಿಳಿಸಿದೆ. ಆದರೆ ಸಂಡೂರಿನಲ್ಲಿ ಮೃತಪಟ್ಟ ವ್ಯಕ್ತಿಯ ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದ್ದು, ವರದಿ ಬಂದ ನಂತರವಷ್ಟೇ ಸ್ಪಷ್ಟ ಉತ್ತರ ಲಭ್ಯವಾಗಲಿದೆ.

LEAVE A REPLY

Please enter your comment!
Please enter your name here