ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಆಹಾರಧಾನ್ಯಗಳ ಜೊತೆಗೆ ಎಂಆರ್ ಪಿ ದರದಲ್ಲಿ ಬೇಳೆ, ಆಡುಗೆ ಎಣ್ಣೆ, ಉಪ್ಪು, ಸಕ್ಕರೆ, ಮೊಟ್ಟೆ ಸೇರಿ ಇನ್ನಿತರ ದಿನಸಿ ಪದಾರ್ಥಗಳನ್ನು ಮಾರಾಟ ಮಾಡಲಿವೆ ಎಂದು ಆಹಾರ ಸಚಿವ ಗೋಪಾಲಯ್ಯ ತಿಳಿಸಿದ್ದಾರೆ.
ರಾಜ್ಯ ಸರ್ಕಾರವು ಪಡಿತರ ಚೀಟಿ ದಾರರಿಗೆ ಆಹಾರ ಧಾನ್ಯಗಳ ಜೊತೆಗೆ ಗೃಹ ಬಳಕೆಯ ವಸ್ತುಗಳನ್ನು ನ್ಯಾಯಬೆಲೆ ಅಂಗಡಿಗಳಲ್ಲಿ ಮಾರಾಟ ಮಾಡಲು ಸಮ್ಮತಿ ಸೂಚಿಸಿದೆ ಎಂದು ಸಚಿವ ಗೋಪಾಲಯ್ಯ ತಿಳಿಸಿದ್ದಾರೆ.
ಇನ್ನು ಗ್ರಾಹಕರು ದಿನಸಿ ವಸ್ತುಗಳನ್ನು ಖರೀದಿಸಿದರೆ ಮಾತ್ರ ಪಡಿತರ ನೀಡುವುದಾಗಿ ನ್ಯಾಯಬೆಲೆ ಅಂಗಡಿಗಳು ಗ್ರಾಹಕರ ಮೇಲೆ ಒತ್ತಡ ಹಾಕುವಂತಿಲ್ಲ.
ಯಾವುದೇ ವಸ್ತು ಖರೀದಿಗೆ ಒತ್ತಾಯ ಮಾಡುವಂತಿಲ್ಲ ಷರತ್ತು ವಿಧಿಸಲಾಗಿದೆ. ಇನ್ನು ಅನ್ನಭಾಗ್ಯ ಯೋಜನೆಯಡಿ ನೀಡುತ್ತಿರುವ ಪಡಿತರ ಆಹಾರ ಧಾನ್ಯಕ್ಕೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವ ಯಾವ ಪ್ರಸ್ತಾವನೆಯೂ ಸರ್ಕಾರದ ಮುಂದಿಲ್ಲ ಎಂದು ಸಚಿವ ಗೋಪಾಲಯ್ಯ ತಿಳಿಸಿದ್ದಾರೆ.