ಬೆಂಗಳೂರು(ಜ.20): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಕಳೆದ ವಾರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಪ್ತ ಸಚಿವರ ಪೈಕಿ ಬಹುತೇಕರು ಪ್ರಮುಖ ಖಾತೆಗಳಿಗೆ ಭಾರಿ ಪೈಪೋಟಿ ನಡೆಸುತ್ತಿದ್ದಾರೆ. ಇದರ ಪರಿಣಾಮ ಖಾತೆಗಳ ಪುನರ್ ಹಂಚಿಕೆ ನಡೆಯುವ ಸಂಭವವಿದೆ ಎನ್ನಲಾಗಿದೆ.
ನೂತನ ಸಚಿವರಾದ ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ಮುರುಗೇಶ್ ನಿರಾಣಿ, ಎಂ.ಟಿ.ಬಿ.ನಾಗರಾಜ್ ಅವರು ಪ್ರಮುಖ ಖಾತೆಗಳ ಆಕಾಂಕ್ಷಿಯಾಗಿದ್ದಾರೆ. ಉಮೇಶ್ ಕತ್ತಿ ಮತ್ತು ಮುರುಗೇಶ್ ನಿರಾಣಿ ಮುಖ್ಯಮಂತ್ರಿ ಬಳಿ ಇರುವ ಇಂಧನ ಖಾತೆ ಮೇಲೆ ಕಣ್ಣಿಟ್ಟಿದ್ದಾರೆ. ಲಿಂಬಾವಳಿ ಅವರು ಬಸವರಾಜ ಬೊಮ್ಮಾಯಿ ಅವರ ಬಳಿಯಿರುವ ಗೃಹ ಖಾತೆ ಅಥವಾ ಪ್ರಮುಖ ಖಾತೆಯ ನಿರೀಕ್ಷೆಯಲ್ಲಿದ್ದಾರೆ. ಎಂ.ಟಿ.ಬಿ.ನಾಗರಾಜ್ ಅವರು ಹಿಂದಿನ ವಸತಿ ಖಾತೆಯ ಆಕಾಂಕ್ಷಿಯಾಗಿದ್ದಾರೆ.
ಆದರೆ, ಮುಖ್ಯಮಂತ್ರಿಗಳು ಈವರೆಗೂ ಯಾವುದೇ ತೀರ್ಮಾನ ಕೈಗೊಂಡಿಲ್ಲ.